ಗಂಗಾವತಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಂಡರೆ ಡೆಂಗ್ಯೂ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ ಎಂದು ಹಿರಿಯ ಅರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ ಮಾಹಿತಿಯನ್ನು ನೀಡಿದರು.
ಗಂಗಾವತಿ ನಗರದ ಹಿರೇಜಂತಕಲ್ ನಮ್ಮ ಕ್ಲಿನಿಕ್ ಆಸ್ಪತ್ರೆ ಬಳಿ ಹಮ್ಮಿಕೊಂಡಿದ್ದ ಡೆಂಗ್ಯೂ ವಿರೋಧಿ ಮಾಸಾಚರಣೆಯಲ್ಲಿ ಮನೆಯ ಸುತ್ತಮುತ್ತ ಸ್ವಚ್ಛ ಪರಿಸರ, ಶುದ್ಧ ನೀರು ಇರುವಂತೆ ನೋಡಿಕೊಳ್ಳಬೇಕು ಹಾಗೂ ಚರಂಡಿಗಳಲ್ಲಿ ನೀರು ನಿಲ್ಲದಂತೆ ಮತ್ತು ಲಾರ್ವಾ ಉತ್ಪತ್ತಿ ಆಗದಂತೆ ಎಚ್ಚರ ವಹಿಸುವುದು ಅತ್ಯಗತ್ಯವಾಗಿದೆ ಇದರಿಂದ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮಾಡಬಹುದು. ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು, ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮುಚ್ಚಳದಿಂದ ಮುಚ್ಚಬೇಕು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಸೊಳ್ಳೆ ನಾಶಕ ಮತ್ತು ಸೊಳ್ಳೆ ಪರದೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು ಯಾವುದೇ ಜ್ವರವಿರಲಿ ಸಮೀಪದ ಹತ್ತಿರದ ಆಸ್ಪತ್ರೆ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯಬೇಕು
ರೋಗಗಳು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಮಾತನಾಡಿ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ನಗರ ಸಭೆಯಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ನಮ್ಮ ಕ್ಲಿನಿಕ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಮಹಾಂತೇಶ ಮಾತನಾಡಿ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಎಲ್ಲೆಡೆ ಮನೆ ಮನೆ ಭೇಟಿ ಮಾಡಿ ಲಾರ್ವಾ ನಿರ್ಮೂಲನ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದು ಎಲ್ಲರೂ ಸಹಕರಿಸಿದರೆ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾದ್ಯ ಎಂದರು.
ಈ ಸಂದರನಗರದಲ್ಲಿ ಆರೋಗ್ಯ ಸಿಬ್ಬಂದಿಗಳಾದ ಸವಿತಾ,ಗುರುರಾಜ,ಹನುಮಂತಿ,ಶಿಲ್ಪ,ಆಶಾ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.
