ಯಲಬುರ್ಗಾ: ಸರ್ಕಾರದ ಆದೇಶದಂತೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತ್ ಯಲಬುರ್ಗಾ ಇವರ ಸಂಯುಕ್ತ ಆಶ್ರಯದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಇದೇ 28 ರವಿವಾರ ರಂದು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಯಲಬುರ್ಗಾ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 12 ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, 79 ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪಟ್ಟಣ ವ್ಯಾಪ್ತಿಯಲ್ಲಿ ಸುಮಾರು 5 ವರ್ಷದೊಳಗಿನ 2192 ಮಕ್ಕಳು ಇದ್ದಾರೆ. ಎಲ್ಲಾ ಮಕ್ಕಳ ಪಾಲಕರು ತಮ್ಮ ಹತ್ತಿರದ ಬೂತ್‌ಗಳಿಗೆ ತೆರಳಿ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ನೀಡಿಸಿಕೊಳ್ಳಬೇಕಾಗಿ ಅವರು ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಅವರು ಕೋರಿದ್ದಾರೆ.
