Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

182ನೇ ದಿನದ ಬಲ್ಡೋಟ ಹಟಾವೋ ಧರಣಿ ಪೂರ್ಣ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

ಕೊಪ್ಪಳ: ನಗರ ಸಭೆ ಆವರಣದ ಮಾಲಿನ್ಯಕಾರಿ ಕಾರ್ಖಾನೆ ತೊಲಗಿಸಿ ಧರಣಿ 182 ದಿನ ಪೂರೈಸಿತು. 2011ರಿಂದ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಕಾರ್ಯಾಚರಣೆ ಮಾಡುತ್ತಿರುವ ಬಲ್ಡೋಟ ಎಂಎಸ್ಪಿಎಲ್ ಪೆಲ್ಲೆಟ್ ಘಟಕ ನಗರದ ಅರ್ಧ ಭಾಗ ಮಾಲಿನ್ಯ ಮಾಡುತ್ತಿದ್ದು, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ, ಕವಲೂರು ಬಡಾವಣೆ, ಗವಿಶ್ರೀನಗರ, ಡಾಲರ್ಸ್ ಕಾಲೊನಿ, ಸದಾಶಿವನಗರ, ಶ್ರೀಗವಿಮಠ, ದಿವಟರನಗರ, ಬಿ.ಟಿ.ಪಾಟೀಲ್ ನಗರ, ಕಲ್ಯಾಣ ನಗರ, ಅಗಡಿ ಲೇಔಟ್ ತೀವ್ರ ಧೂಳು ಬಾಧಿತವಾಗಿವೆ. ಈ ಕಾರ್ಖಾನೆಯ ಏಕೈಕ ಚಿಮಣಿ ಇಷ್ಟು ಪ್ರದೇಶದ ಪರಿಸರ ಮಾಲಿನ್ಯ ಮಾಡುತ್ತಿದೆ. ಇದಲ್ಲದೆ ಹಿರೇಬಗನಾಳ, ಅಲ್ಲಾನಗರ ಸುತ್ತಲಿನ ಸ್ಪಾಂಜ್ ಐರನ್, ಪೆಲ್ಲೆಟ್ ಘಟಕಗಳನ್ನು ಕೇಂದ್ರ ಪರಿಸರ ಇಲಾಖೆ ಶಿಫಾರಸ್ಸು ಮಾಡಿರುವಂತೆ ಶೀಘ್ರದಲ್ಲಿ ಸ್ಥಳಾಂತರ ಮಾಡಬೇಕು. news_1777560942_0_457.webpಬಲ್ಡೋಟ ಅತಿಕ್ರಮಿಸಿರುವ ಬಸಾಪುರ ಕೆರೆಯನ್ನು ಹೈಕೋರ್ಟ್ ಆದೇಶದಂತೆ ಸುತ್ತಲಿನ ಗ್ರಾಮಗಳ ಜಾನುವಾರು ನೀರು ಕುಡಿಯಲು ಮುಕ್ತಗೊಳಿಸಬೇಕು. ತುಂಗಭದ್ರಾ ವಿಷಗೊಳಿಸುವ ಕಾರ್ಖಾನೆಗಳನ್ನು ಮುಚ್ಚಬೇಕು, ಎಐಐಎಂಸ್, ಐಐಎಸ್ಸಿ ಸಂಸ್ಥೆಗಳಿಂದ ಕಾರ್ಖಾನೆ ಮಾಲಿನ್ಯ ಬಾಧಿತ 22 ಹಳ್ಳಿ ಜನರ ಆರೋಗ್ಯ ಮತ್ತು ಪರಿಸರ, ತುಂಗಭದ್ರಾ ನೀರು ವಿಷಗೊಳಿಸಿದ್ದರ ಸಮೀಕ್ಷೆ ನಡೆಸಬೇಕು. ಬಾಧಿತ ಹಳ್ಳಿಗಳ ಪುನರುಜ್ಜೀವನಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ನಡೆಯುತ್ತಿರವ ಅನಿರ್ದಿಷ್ಟ ಧರಣಿ ವೇದಿಕೆಯ 200ನೇ ದಿನದ ಹೋರಾಟ ಬೆಂಬಲಿಸಲು ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು, ಕೊಪ್ಪಳ ಅಭಿವೃದ್ಧಿ ಬಗ್ಗೆ ಪುಸ್ತಕ ಬರೆದ, ಖ್ಯಾತ ಆರ್ಥಿಕ ತಜ್ಞ ಟಿ.ಆರ್.ಚಂದ್ರಶೇಖರ ಅವರು ಅತಿಥಿಯಾಗಿ ಆಗಮಿಸುತ್ತಾರೆ ಎಂದು ಸಂಘಟಕರು ತಿಳಿಸಿದರು.

ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಹಾಂತೇಶ ಕೊತಬಾಳ, ನಟರಾಜ ಸವಡಿ, ವಿದ್ಯಾರ್ಥಿನಿಗಳಾದ ಪ್ರಗತಿ ಕೆ.ವಿ.ಎಸ್, ಉಮಾದೇವಿ, ಶಂಭುಲಿಂಗಪ್ಪ ಹರಗೇರಿ, ರಾಜಶೇಖರ ಏಳುಭಾವಿ, ಶಿವಾನಂದಯ್ಯ ಬೀಳಗಿಮಠ, ಯಮನೂರಪ್ಪ ಹಾಲಳ್ಳಿ ಬಸಾಪುರ, ಹನುಮಂತ ತಳವಾರ ಬಸಾಪುರ, ಎಂ.ಡಿ. ಬಸೀರ್ ಅರಗಂಜಿ, ಭೀಮಪ್ಪ ಯಲಬುರ್ಗಾ, ರತ್ನಮ್ಮ, ಗಂಗಮ್ಮ ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!