Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

210ನೇ ದಿನದ ಬಲ್ಡೋಟ ತೊಲಗಿಸಿ ಧರಣಿ ಯಶಸ್ವಿ;

ಡಿ.ಡಿ. ನ್ಯೂಸ್ : ಕೊಪ್ಪಳ

Advertisement

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ನೇತೃತ್ವದಲ್ಲಿ ನಗರಸಭೆ ಮುಂದೆ ನಡೆಯುತ್ತಿರುವ ಧರಣಿ 210 ನೇ ದಿನಗಳನ್ನು ಪೂರ್ಣಗೊಳಿಸಿತು. ಅವಳಿ ನಗರದ ಜನರ ಆರೋಗ್ಯ ಹಾನಿ ಮಾಡಲು 54 ಸಾವಿರ ಕೋಟಿ ಹೂಡಿಕೆಯಲ್ಲಿ ಕಾರ್ಖಾನೆ ಸ್ಥಾಪನೆಗೆ ಮುಂದಾದ ಬಲ್ಡೋಟ ಕುರಿತು ಗವಿಶ್ರೀಗಳು ಧರ್ಮಾದೇಶ ಮಾಡಿದಂತೆ ಈ ಹೂಡಿಕೆ ತಡೆದ ಆದೇಶ ಪತ್ರವನ್ನು ಜನಪ್ರತಿನಿಧಿಗಳು ತರಬೇಕು.

ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡು 2011ರಿಂದ ಬಲ್ಡೋಟ ಎಂಎಸ್ಪಿಎಲ್ ಪೆಲ್ಲೆಟ್ ಘಟಕದಿಂದ ನಗರದ ಅರ್ಧ ಭಾಗ ಬಾಧಿತವಾಗುತ್ತಿದ್ದು, ನಗರದ ಜನರ ಆರೋಗ್ಯದ ದುಷ್ಪರಿಣಾಮ ತಡೆಯಲು ಈ ಘಟಕ ಬಂದ್ ಮಾಡಿ ಜನರ ಆರೋಗ್ಯ ಖಾತ್ರಿಪಡಿಸಸಬೇಕು. ಬಲ್ಡೋಟ ಕಂಪನಿಯು ಬಸಾಪುರ ಗ್ರಾಮ ಕೆರೆಯನ್ನು ಅನಧಿಕೃತವಾಗಿ ಮಂಜೂರಿ ಹೆಸರಿನಲ್ಲಿ ವಶಪಡಿಸಿಕೊಂಡಿದ್ದು ಕಂಪನಿ ಹಾಕಿದ ಕಾಂಪೌಂಡ್ ತೆರವು ಮಾಡಿ ಜಾನುವಾರು ನೀರು ಕುಡಿಯಲು ಅವಕಾಶ ಮಾಡಿಕೊಡಬೇಕು.news_1779974874_0_700.webp

ತುಂಗಭದ್ರ ನೀರು ವಿಷಗೊಳಿಸುತ್ತಿರುವ ಮಾಲಿನ್ಯಕಾರಿ ಕಾರ್ಖಾನೆಗಳನ್ನು ಮುಚ್ಚಬೇಕು. ಹಿರೇಬಗನಾಳ, ಅಲ್ಲಾನಗರ ಪಕ್ಕದ ಸ್ಪಾಂಜ್ ಐರನ್ ಕಾರ್ಖಾನೆಗಳನ್ನು ಕೇಂದ್ರ ಪರಿಸರ ಇಲಾಖೆ ವರದಿಯ ಶಿಫಾರಸಿನಂತೆ ನಿರ್ಜನ ಪ್ರದೇಶಕ್ಕೆ ಸ್ಥಳಾಂತರಿಸಬೇಕು. ಸರ್ಕಾರ ಕಾರ್ಖಾನೆ ಧೂಳು ಬಾಧಿತ 22 ಹಳ್ಳಿಗಳ ಪುನರುಜ್ಜೀವನ ಮಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು. ಎ.ಐ.ಐ.ಎಂ.ಎಸ್ ಸಂಸ್ಥೆ ಮತ್ತು ಐ.ಐ.ಎಸ್.ಸಿ ಸಂಸ್ಥೆಯಿಂದ ಜನರ ಆರೋಗ್ಯ ಮತ್ತು ಪರಿಸರ ಹಾನಿಯ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಧರಣಿ ನಡೆಸಲಾಗುತ್ತಿದೆ. 

ಧರಣಿಯಲ್ಲಿ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಪ್ರಕಾಶಕಿ ಮಾಲಾ ಬಡಿಗೇರ, ರವಿ ಕಾಂತನವರ, ಮೂಕಪ್ಪ ಮೇಸ್ತ್ರಿ ಬಸಾಪುರ, ನಿವೃತ್ತ ಉಪನ್ಯಾಸಕರಾದ ಡಾ ಬಸವರಾಜ ಪೂಜಾರ, ಶಂಭುಲಿಂಗಪ್ಪ ಹರಗೇರಿ, ರಾಜಶೇಖರ ಏಳುಬಾವಿ, ಎಸ್. ಮಹಾದೇವಪ್ಪ ಮಾವಿನಮಡು, ಚಾರಣ ಬಳಗದ ಸಿ.ಬಿ.ಪಾಟೀಲ್, ಅಣ್ಣಪ್ಪ ಬಾರಕೇರ, ತಿಪ್ಪಣ್ಣ ಹಾದಿಮನಿ, ಮಾನವ ಬಂಧುತ್ವ ವೇದಿಕೆಯ ಬೆಟ್ಟಪ್ಪ ಯತ್ನಟ್ಟಿ, ರಣದಪ್ಪ ಸುಂಕಣ್ಣನವರ, ಹೊನ್ನೂರಸಾಬ್ ನದಾಫ್, ಬಸವಂತಪ್ಪ ಚೌವಾಣ, ರಮೇಶ ಪಿ.ಬಿ ಪಾಲ್ಗೊಂಡರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!