Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ: ಬಿಇಒ ಅಶೋಕ ಗೌಡ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ: ಯೋಗಾಭ್ಯಾಸದಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಬಿಇಒ ಅಶೋಕ ಗೌಡ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಯಲು ರಂಗಮಂದಿರ ಆವರಣದಲ್ಲಿ ರವಿವಾರ ತಾಲೂಕು ಆಡಳಿತ ಹಾಗೂ ಶ್ರೀ ಬಸವಲಿಂಗೇಶ್ವರ ಯೋಗ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗವು ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಹಾಗೂ ದೈಹಿಕ ಸದೃಢತೆ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ನಿತ್ಯ ಯೋಗ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.news_1782053832_0_684.webpಕಾರ್ಯಕ್ರಮದಲ್ಲಿ ವಕ್ತಾರ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಯೋಗವು ವಿಶ್ವದಾದ್ಯಂತ ಹೆಚ್ಚಿನ ಪ್ರಚಾರ ಪಡೆದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ಯಲಬುರ್ಗಾದ ಶ್ರೀಧರ ಮುರುಡಿಮಠದ ಬಸವಲಿಂಗೇಶ್ವರ ಸ್ವಾಮೀಜಿ, ಉತ್ತಮ ಆರೋಗ್ಯ ಮತ್ತು ಶಾಂತ ಜೀವನಕ್ಕಾಗಿ ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಬೇನಾಳದ ಸದಾಶಿವ ಸ್ವಾಮೀಜಿ ಹಾಗೂ ಜಿಗೇರಿಯ ಕರಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಪಪಂ ಮುಖ್ಯಾಧಿಕಾರಿ ನಾಗೇಶ, ಆಯುಷ್ ವೈದ್ಯ ಡಾ. ವಿವೇಕ ವಾಗುಲೆ, ಸುರೇಶಗೌಡ ಶಿವನಗೌಡ್ರ, ಅಮರೇಶ ಹುಬ್ಬಳ್ಳಿ, ಬಸವರಾಜ ಗುಳಗುಳಿ, ಸಂತೋಷಿಮಾ ಜೋಶಿ, ದೊಡ್ಡಯ್ಯ ಗುರುವಿನ, ಉಮೇಶ ಕುಂಬಾರ, ಖಾದರಸಾಬ, ಸಂಗಮೇಶ ಶ್ಯಾಗೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!