Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ: ದೀನದಯಾಳ ಶಿರೋಳ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಗುಡ್ ಶೇಫರ್ಡ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ

ಯಲಬುರ್ಗಾ: ಯೋಗವು ಕೇವಲ ವ್ಯಾಯಾಮವಲ್ಲ, ಅದು ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನದ ಮಾರ್ಗವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ನಿತ್ಯ ಯೋಗಾಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಬೆಳೆಸಿಕೊಳ್ಳಬೇಕು ಎಂದು ಗುಡ್ ಶೇಫರ್ಡ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವ್ಯವಸ್ಥಾಪಕರಾದ ದೀನದಯಾಳ ಶಿರೋಳ ಹೇಳಿದರು.news_1782052574_0_797.webpತಾಲೂಕಿನ ಕುದ್ರಿಕೋಟಗಿ ಗ್ರಾಮದ ಗುಡ್ ಶೇಫರ್ಡ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯೋಗಾಭ್ಯಾಸವು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಮನೋಭಾವವನ್ನು ಬೆಳೆಸುತ್ತದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ದೈಹಿಕ ಚಟುವಟಿಕೆಗಳಿಂದ ದೂರವಾಗುತ್ತಿರುವ ಸಂದರ್ಭದಲ್ಲಿ ಯೋಗವು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಶಾಲೆಯಲ್ಲಿ ಪಠ್ಯ ಚಟುವಟಿಕೆಗಳ ಜೊತೆಗೆ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.news_1782052638_0_162.webpಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯೋಗ ತರಬೇತುದಾರರಾದ ಮಹೇಶ್ ಕುಂಬಾರ, ರಾಜೇಶ್ವರಿ ಶೇಟ್ ಹಾಗೂ ಸುಮಾ ಸುರಕೋಡ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರದರ್ಶನ ನೀಡಿ ಯೋಗದ ಮಹತ್ವದ ಕುರಿತು ವಿವರಿಸಿದರು. ನಿಯಮಿತ ಯೋಗಾಭ್ಯಾಸದಿಂದ ದೇಹದ ಆರೋಗ್ಯ ಸುಧಾರಿಸುವುದರ ಜೊತೆಗೆ ಮನಸ್ಸಿನ ನೆಮ್ಮದಿ, ಏಕಾಗ್ರತೆ ಹಾಗೂ ಶಿಸ್ತು ಹೆಚ್ಚುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಅವಿನಾಶ್ ಕೆ.ಎಸ್., ಶಿಕ್ಷಕಿಯರಾದ ರೀಟಾ ಶಿರೋಳ, ಗೌರಮ್ಮ ಪಾಟೀಲ್, ಖಾಜಾಬೇಗಂ ವಣಗೇರಿ, ಕಲ್ಪನಾ ವಿಶ್ವಕರ್ಮ, ಯಶೋಧ, ಪಾರ್ವಿನ್ ಬೇಗಂ, ಸಲ್ಮಾ ಹಾಗೂ ಶಿಕ್ಷಕರಾದ ಮನೋಜ್ ಶೇಲ್ಲದ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಕಾರ್ಯಕ್ರಮದ ಅಂತ್ಯದಲ್ಲಿ ಪ್ರತಿದಿನ ಯೋಗಾಭ್ಯಾಸ ಮಾಡುವ ಸಂಕಲ್ಪವನ್ನು ಎಲ್ಲರೂ ಸ್ವೀಕರಿಸಿದರು. ಆರೋಗ್ಯಕರ ಜೀವನಶೈಲಿಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಯಿತು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!