ಉದ್ಯೋಗ ಖಾತ್ರಿ ಕೆಲಸದಿಂದ ಕೂಲಿಕಾರರಿಗೆ ಆರ್ಥಿಕವಾಗಿ ಅಭಿವೃದ್ಧಿಗೆ ಸಹಕಾರಿ: ಹನಮಂತಗೌಡ ಪೊಲೀಸ್ ಪಾಟೀಲ್
ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ತಾಳಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಭಾವಿ ಗ್ರಾಮದಲ್ಲಿ 2026-27ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಕೂಲಿಕಾರರನ್ನುದ್ದೇಶಿಸಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಎರಡು ತಿಂಗಳ ನಿರಂತರ ಕೆಲಸ ಕೊಡುತ್ತಿದ್ದು, ಈ ಎರಡು ತಿಂಗಳಲ್ಲಿ ಶೇಕಡಾ 80 ರಷ್ಟು ಮಾನವ ದಿನಗಳ ಸದುಪಯೋಗ ಪಡೆಯಬೇಕು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಅಳತೆಗೆ ತಕ್ಕಂತೆ ವೇತನ. ಗಂಡು ಹೆಣ್ಣಿಗೆ ಸಮಾನ ವೇತನ ನೀಡಲಾಗುತ್ತಿದೆ ಎಂದರು.
ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ ಆರ್ಥಿಕವಾಗಿ ಸಬಲರಾಗಬೇಕಿದೆ.
ಸರ್ಕಾರದಿಂದ ಮಹಿಳೆಯರಿಗೆ ವಿಶೇಷ ಯೋಜನೆಗಳನ್ನು ನೀಡುತ್ತಿವೆ. ಸಾಕಷ್ಟು ಅವಕಾಶಗಳನ್ನು ಕಲ್ಪಿಸುತ್ತಿದ್ದು, ಗ್ರಾಮ ಪಂಚಾಯತಿಗಳು ಮಹಿಳಾ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಾ ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ತಾಂತ್ರಿಕ ಸಂಯೋಜಕರಾದ ಸಂತೋಷ ನಂದಾಪುರ, ಐಇಸಿ ಸಂಯೋಜಕರು, ಗ್ರಾಮ ಪಂಚಾಯತಿ ಪಿಡಿಒರಾದ ರಾಮಣ್ಣ, ಡಿಇಒ, ಟಿಎಇ, ಬಿಎಫ್ ಟಿ, ಗ್ರಾ.ಪಂ ಸಿಬ್ಬಂದಿ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.
