Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶ್ರೀ ಬಸವಲಿಂಗೇಶ್ವರ ಸ್ವಾಮಿಜಿ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

12ನೇ ಶತಮಾನದಲ್ಲಿಯೇ ಜಾತಿ-ಮತ ಭೇದವಿಲ್ಲದೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಜಗಜ್ಯೋತಿ ಬಸವಣ್ಣನವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯಲಬುರ್ಗಾ ಪಟ್ಟಣದ ಶ್ರೀ ಶ್ರೀಧರ ಮೂರಡಿ ಹೀರೆಮಠದ ಶ್ರೀ ಬಸವಲಿಂಗೇಶ್ವರ ಸ್ವಾಮಿಜಿ ಹೇಳಿದರು.news_1776855067_0_679.webpಪಟ್ಟಣದ ಶ್ರೀ ಮೂಗ್ಗಿ ಬಸವೇಶ್ವರ ಜಾತ್ರೆಯ ನಿಮಿತ್ತ ಆಯೋಜಿಸಲಾಗಿದ್ದ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. “ಸಕಲ ಜೀವಿಗಳಿಗೆ ಲೇಸನ್ನೇ ಬಯಸುವ” ಸಮಾನತೆಯ ಚಿಂತನೆ ಬಸವಣ್ಣನವರದು. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವ ಮೂಲಕ “ಕಾಯಕವೇ ಕೈಲಾಸ” ಎಂಬ ಅವರ ಮಹತ್ವದ ತತ್ವವನ್ನು ಜೀವನದಲ್ಲಿ ಅನುಸರಿಸಬೇಕು ಎಂದು ತಿಳಿಸಿದರು. ಅಂದಿನ ಅನುಭವ ಮಂಟಪವು ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯವಾಗಿದ್ದು, ಬಸವಣ್ಣನವರ ವಚನಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ 20 ಜೋಡಿಗಳ ಸಾಮೂಹಿಕ ವಿವಾಹಗಳು ನೆರವೇರಿದವು.

ಈ ಸಂದರ್ಭದಲ್ಲಿ ಮೂಗ್ಗಿ ಬಸವೇಶ್ವರ ಗೌರವ ಅಧ್ಯಕ್ಷ ಶೇಖರಗೌಡ ಉಳಗಡ್ಡಿ, ಈರಪ್ಪ ಕುಡಗುಂಟಿ, ವೀರನಗೌಡ ಬನ್ನಪಗೌಡರ, ಸಂಗಣ್ಣ ತೇಂಗಿನಕಾಯಿ, ಮೈಲಾರಗೌಡ ತಳವಗೇರಿ, ಮಂಜುನಾಥ ಅಧಿಕಾರಿ, ಸುರೇಶಗೌಡ ಶಿವನಗೌಡರ, ಅಂಬರೇಶ ಹುಬ್ಬಳ್ಳಿ, ದೊಡ್ಡಯ್ಯ ಗುರವಿನ, ಕರಸಿದ್ದಪ್ಪ ಮುಳಗುಂದ, ಕಲ್ಲನಗೌಡ ಓಜಿನಹಳ್ಳಿ, ಬಸವರಾಜ ಅಧಿಕಾರಿ, ಷಣ್ಮುಖಪ್ಪ ರಾಂಪೂರ, ಶರಣಗೌಡ ಕೊಡಗಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!