Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಪಿಡಿಒ ಮೇಲೆ ಹಲ್ಲೆ... ಸದಸ್ಯತ್ವಕ್ಕೆ ಕತ್ತರಿ!

ಡಿ.ಡಿ. ನ್ಯೂಸ್ : ಬೆಂಗಳೂರು

Advertisement

•ಹಿರೇಮ್ಯಾಗೇರಿ ಪ್ರಕರಣ : ಪಂಚಾಯತ್ ರಾಜ್ ವ್ಯವಸ್ಥೆ ಖಡಕ್ ಸಂದೇಶ

•ಮಹಿಳಾ ಅಧಿಕಾರಿಗೆ ಅವಮಾನ, ಹಲ್ಲೆ ಆರೋಪ ಸಾಬೀತು, ಸದಸ್ಯತ್ವ ರದ್ದು, 6 ವರ್ಷ ಅನರ್ಹತೆ

•ಗ್ರಾಪಂ ಗಲಾಟೆ : ಕುರ್ಚಿ ಕಳೆದುಕೊಂಡ ಸದಸ್ಯೆ

ಶರಣು ಗುಮಗೇರಿ

ಬೆಂಗಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಗಲಾಟೆಯೊಂದು ಇದೀಗ ರಾಜ್ಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ತವ್ಯ ನಿರತ ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ ಬಂಡಿವಡ್ಡರ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ, ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ಸರ್ಕಾರ ಆದೇಶ ಹೊರಡಿಸಿರುವುದು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಚಲನ ಮೂಡಿಸಿದೆ.news_1779617386_0_111.webpಈ ಘಟನೆ ಕೇವಲ ಒಬ್ಬ ಸದಸ್ಯೆಯ ವಿರುದ್ಧದ ಕ್ರಮವಾಗಿ ಮಾತ್ರ ಉಳಿದಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ದಿನೇದಿನೇ ಹೆಚ್ಚಾಗುತ್ತಿರುವ ರಾಜಕೀಯ ದಬ್ಬಾಳಿಕೆ, ಅಧಿಕಾರಿಗಳ ಮೇಲೆ ಒತ್ತಡ, ಬೆದರಿಕೆ ಹಾಗೂ ದುರ್ವರ್ತನೆ ವಿರುದ್ಧ ಸರ್ಕಾರ ನೀಡಿರುವ ಕಠಿಣ ಎಚ್ಚರಿಕೆಯಾಗಿ ಇದನ್ನು ಪರಿಗಣಿಸಲಾಗುತ್ತಿದೆ.

ಏನಿದು ಪ್ರಕರಣ? : 2025ರ ಫೆಬ್ರವರಿ 27ರಂದು ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮನೆಗಳ ಆಯ್ಕೆ ಸಂಬAಧ ಸಭೆ ನಡೆಯುತ್ತಿತ್ತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರತ್ನಮ್ಮ ಗುಂಡಣ್ಣವರ ಉಪಸ್ಥಿತರಿದ್ದರು.

ಈ ವೇಳೆ ಸದಸ್ಯೆ ಶಾಂತಮ್ಮ ಬಂಡಿವಡ್ಡರ ತಮ್ಮ ಮಗನೊಂದಿಗೆ ಕಚೇರಿಗೆ ನುಗ್ಗಿ ಪಿಡಿಒ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ, ಪಾದರಕ್ಷೆಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಘಟನೆ ನಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿ, ಪ್ರಕರಣ ಜಿಲ್ಲೆ, ರಾಜ್ಯ ಮಟ್ಟದ ಅಧಿಕಾರಿಗಳ ಗಮನ ಸೆಳೆದಿತ್ತು.

ಸಂಘಟನೆಗಳ ಹೋರಾಟಕ್ಕೂ ಫಲ: ಪ್ರಕರಣದ ಬಳಿಕ ಸರ್ಕಾರಿ ನೌಕರರ ಸಂಘ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ, ಮನವಿ ಸಲ್ಲಿಕೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿತ್ತು. ಮಹಿಳಾ ಅಧಿಕಾರಿಗಳ ಸುರಕ್ಷತೆ ಮತ್ತು ಪಂಚಾಯತ್ ಸಿಬ್ಬಂದಿಯ ಗೌರವ ಕಾಪಾಡಬೇಕೆಂದು ಸಂಘಟನೆಗಳು ಆಗ್ರಹಿಸಿದ್ದವು. ಸಂಘಟನೆಗಳ ನಿರಂತರ ಒತ್ತಡ ಮತ್ತು ಸರ್ಕಾರದ ಮಟ್ಟದಲ್ಲಿ ನಡೆದ ಪರಿಶೀಲನೆಯ ನಂತರ ಇದೀಗ ಸದಸ್ಯತ್ವ ರದ್ದು ಮಾಡುವ ತೀರ್ಮಾನ ಹೊರಬಿದ್ದಿದೆ.news_1779617424_0_287.webpಸಿಸಿಟಿವಿ ದೃಶ್ಯವೇ ಟರ್ನಿಂಗ್ ಪಾಯಿಂಟ್: ಪ್ರಕರಣದ ತನಿಖೆ ವೇಳೆ ತಾಪಂ ಅಧಿಕಾರಿಗಳು ಗ್ರಾಪಂಗೆ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಮಧ್ಯಾಹ್ನ 1.40ರಿಂದ 2 ಗಂಟೆಯೊಳಗೆ ನಡೆದ ಘಟನೆಯ ದೃಶ್ಯಗಳು ದಾಖಲಾಗಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ದೃಶ್ಯಾವಳಿಗಳೇ ಸರ್ಕಾರದ ಕ್ರಮಕ್ಕೆ ಪ್ರಮುಖ ಆಧಾರವಾಗಿವೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ವರದಿ ಹಾಗೂ ಲಭ್ಯ ದಾಖಲೆಗಳ ಆಧಾರದ ಮೇಲೆ ಸರ್ಕಾರ ಸದಸ್ಯತ್ವ ರದ್ದುಪಡಿಸುವ ನಿರ್ಧಾರ ಕೈಗೊಂಡಿದೆ.

ಅಧಿಕಾರಿಗಳ ಮೇಲೆ ದೌರ್ಜನ್ಯ ಸಹಿಸಲಾಗದು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳು ಸಾರ್ವಜನಿಕ ಸೇವೆಯ ಹೊಣೆ ಹೊತ್ತವರಾಗಿದ್ದಾರೆ. ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಬೆದರಿಕೆ, ಅವಮಾನಕಾರಿ ವರ್ತನೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಗಂಭೀರ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ.

ಈ ಪ್ರಕರಣದಲ್ಲಿ ಮಹಿಳಾ ಸರ್ಕಾರಿ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿರುವ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಸರ್ಕಾರ ನೇರವಾಗಿ ಸದಸ್ಯತ್ವ ರದ್ದುಪಡಿಸಿ, ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹತೆ ವಿಧಿಸಿರುವುದು ಗಮನಾರ್ಹವಾಗಿದೆ.

ಪಂಚಾಯಿತಿಗಳಲ್ಲಿ ಹೆಚ್ಚುತ್ತಿರುವ ಒತ್ತಡ ರಾಜಕಾರಣ:ಗ್ರಾಪಂಗಳಲ್ಲಿ ಪಿಡಿಒಗಳು ಹಾಗೂ ಸಿಬ್ಬಂದಿಗಳು ರಾಜಕೀಯ ಒತ್ತಡದ ನಡುವೆಯೇ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿವೆ.

ಮನೆ ಮಂಜೂರು, ಕಾಮಗಾರಿಗಳ ಬಿಲ್, ಅನುದಾನ ಹಂಚಿಕೆ, ಟೆಂಡರ್, ಫಲಾನುಭವಿಗಳ ಆಯ್ಕೆ ಮೊದಲಾದ ವಿಚಾರಗಳಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗುತ್ತಿರುವುದರಿಂದ ಅನೇಕ ಅಧಿಕಾರಿಗಳು ಮಾನಸಿಕ ಒತ್ತಡದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಕೆಲವೆಡೆ ಅಧಿಕಾರಿಗಳ ಮೇಲೆ ನಿಂದನೆ, ಬೆದರಿಕೆ ಹಾಗೂ ಹಲ್ಲೆ ಪ್ರಕರಣಗಳು ನಡೆದಿದ್ದರೂ ಕಠಿಣ ಕ್ರಮ ಕಡಿಮೆ ಕಂಡುಬರುತ್ತಿತ್ತು. ಆದರೆ ಹಿರೇಮ್ಯಾಗೇರಿ ಪ್ರಕರಣದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಇದೀಗ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ದಬ್ಬಾಳಿಕೆ ರಾಜಕಾರಣಕ್ಕೆ ಬ್ರೇಕ್ : ರಾಜಕೀಯವಾಗಿ ಆಯ್ಕೆಯಾದ ಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಕೆಲಸ ಮಾಡಬೇಕೇ ಹೊರತು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಲು ಅಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಎಚ್ಚರಿಕೆಯ ಸಂದೇಶ:ಹಿರೇಮ್ಯಾಗೇರಿ ಪ್ರಕರಣ ಇದೀಗ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಪ್ರತಿನಿಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ, ಅಧಿಕಾರದ ಅಹಂಕಾರದಲ್ಲಿ ಕಾನೂನು ಮೀರೆದರೆ ಕುರ್ಚಿಯೇ ಕೈ ತಪ್ಪುತ್ತದೆ,

ಕೋಟ್-1

ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಪಿಡಿಒಗಳಿಗೆ ಇನ್ನಷ್ಟು ರಕ್ಷಣೆ ನೀಡಬೇಕು.ಗ್ರಾಮ ಪಂಚಾಯಿತಿಗಳಲ್ಲಿ ಹಲವರು ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ಸರಕಾರ ಪಿಡಿಒಗಳ ರಕ್ಷಣೆಗೆ ಕಾಯ್ದೆ ಜಾರಿಗೆ ತರಬೇಕು

ಫಕೀರಪ್ಪ ಕಟ್ಟಿಮನಿ

ಜಿಲ್ಲಾ ಗೌರವ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘ, ಕೊಪ್ಪಳ

ತಾಲೂಕಿನ ಹಿರೇಮ್ಯಾಗೇರಿ ಗ್ರಾಪಂ ಕಚೇರಿ

ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಪಂ ಸದಸ್ಯೆ ಶಾಂತಮ್ಮ ಭಾವಚಿತ್ರ

ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಪಂ ಸದಸ್ಯೆ ಅನರ್ಹತೆ ಆದೇಶ ಪ್ರತಿ

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!