Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಬಕ್ರೀದ್ ಹಬ್ಬ ಶಾಂತಿ ಸಭೆ ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ಮಾಲಿ ಪಾಟೀಲ್

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ ಬಕ್ರೀದ್ ಹಬ್ಬವನ್ನು ತಾಲೂಕಿನಾದ್ಯಂತ ಶಾಂತಿಯುತ, ಸೌಹಾರ್ದಯುತ ಹಾಗೂ ಕಾನೂನುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಶಾಂತಿ ಸಭೆಯನ್ನು ಆಯೋಜಿಸಲಾಯಿತು. 

ಸಭೆ ಉದ್ದೇಶಿಸಿ ಸಿಪಿಐ ಮೌನೇಶ್ವರ ಮಾಲಿ ಪಾಟೀಲ್ ಮಾತನಾಡಿ,ಬಕ್ರೀದ್ ಹಬ್ಬವು ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುವ ರೀತಿಯಲ್ಲಿ ಆಚರಣೆ ನಡೆಯಬೇಕು ಎಂದು ಹೇಳಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು, ಪ್ರಚೋದನಕಾರಿ ಸಂದೇಶಗಳು ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.news_1779866588_0_366.webpಪಿಎಸ್ಐ ವಿಜಯ ಪ್ರತಾಪ್ ಮಾತನಾಡಿ,ಹಬ್ಬದ ಸಂದರ್ಭದಲ್ಲಿ ಮೆರವಣಿಗೆ, ಸಾರ್ವಜನಿಕ ಪ್ರಾರ್ಥನೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆಯಬೇಕೆಂದು ಸೂಚನೆ ನೀಡಿದರು. ಯಾವುದೇ ಸಮಸ್ಯೆ ಅಥವಾ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಹಾಗೂ ಹಿಂದೂ ಮುಖಂಡರು ಕೂಡ ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಸಮುದಾಯದ ಎಲ್ಲರೂ ಕೈಜೋಡಿಸುವುದಾಗಿ ತಿಳಿಸಿದರು.

 ಈ ಸಂದರ್ಭದಲ್ಲಿ ಪ್ರಮುಖರಾದ ವೀರಣ್ಣ ಹುಬ್ಬಳ್ಳಿ,ಬಾಬುಸಾಬ ಕುಂದಗೋಳ,ಮಂಜುನಾಥ ಅಧಿಕಾರಿ,ಮೆಹಬೂಬಸಾಬ ಮಕಾಂದರ,ಶಿವಾನಂದ ಬಣಕಾರ್,ಸುರೇಶ ನಡಲುಮನಿ,ಬಾಬುಸಾಬ ಮಂಡಲಗೇರಿ,ಚಂದ್ರಪ್ಪ ನಡಲುಮನಿ,ಸಿಬ್ಬಂದಿಗಳಾದ ವಿಠ್ಠಲ್,ಬಸಯ್ಯ,ಶರಣು ಸೇರಿದಂತೆ ಇತರರು ಇದ್ದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!