Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

196ನೇ ದಿನದಲ್ಲಿ ಬಲ್ಡೋಟ ಫ್ಯಾಕ್ಟರಿ ಹಟಾವೋ ಕೊಪ್ಪಳ ಬಚಾವೋ ಧರಣಿ ಯಶಸ್ವಿ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

ದಿ: 18.05.2026ರಂದು ಹೋರಾಟಕ್ಕೆ 200 ದಿನ ತಲುಪುತ್ತದೆ. ವಿಶೇಷ ಧರಣಿಗೆ ಬನ್ನಿ: ಅಲ್ಲಮಪ್ರಭು 

ಕೊಪ್ಪಳ ನಗರಸಭೆ ಆವರಣದಲ್ಲಿ ನಡೆಯುತ್ತಿರುವ 196ನೇ ದಿನದ ಧರಣಿಯಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿಕೆ ನೀಡಿ, ದಿ: 18.05.2026ರಂದು ಸೋಮವಾರ ಹೋರಾಟ 200 ದಿನ ತಲುಪುತ್ತದೆ. ಅಂದು ಧರಣಿ ವೇದಿಕೆಯಲ್ಲಿ ಬಹಿರಂಗ ಸಭೆ ನಡೆಸಲಾಗುತ್ತದೆ. ಬಹಿರಂಗ ಸಭೆಯಲ್ಲಿ ಆರ್ಥಿಕ ತಜ್ಞ, ಹಂಪಿ ವಿವಿ ನಿವೃತ್ತ ಪ್ರಾಧ್ಯಾಪಕ ಟಿ.ಆರ್.ಚಂದ್ರಶೇಖರ, ನಿರ್ಮಲ ತುಂಗಭದ್ರಾ ಆಂದೋಲನದ ಗಂಗಾವತಿ ನಿವಾಸಿ ಡಾ. ಶಿವಕುಮಾರ ಮಾಲಿಪಾಟೀಲ್ ಅತಿಥಿಗಳಾಗಿ ಆಗಮಿಸಿ ಧರಣಿಗೆ ಬೆಂಬಲಿಸಿ ಮಾತನಾಡುತ್ತಾರೆ. ಕೊಪ್ಪಳ ನಗರ ಮತ್ತು ಕಾರ್ಖಾನೆ ಬಾಧಿತ ಗ್ರಾಮಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ವಿಶೇಷ ಧರಣಿ ಹೋರಾಟದಲ್ಲಿ ಭಾಗವಹಿಸಬೇಕೆಂದು ವೇದಿಕೆ ಮೂಲಕ ಮನವಿ ಮಾಡಿದರು. news_1778766405_0_146.webpಬಲ್ಡೋಟ ಕಾರ್ಖಾನೆ ಮಾಲಿನ್ಯದಿಂದ ಕೊಪ್ಪಳ ಭಾಗ್ಯನಗರದ ಒಂದೂವರೆ ಲಕ್ಷ ಜನರ ಜೀವ, ಆರೋಗ್ಯ ಭವಿಷ್ಯ ಖಾತರಿಪಡಿಸಬೇಕು. ಗವಿಶ್ರೀಗಳು ಧರ್ಮಾದೇಶ ಮಾಡಿರುವಂತೆ ಬಲ್ಡೋಟ ವಿಸ್ತರಣೆಯ ಅನುಮತಿಯನ್ನು ವಾಪಸ್ ಪಡೆದ ಪತ್ರವನ್ನು ಜನಪ್ರತಿನಿಧಿಗಳು ತರಬೇಕು. ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡು 2011ರಿಂದ ಬಲ್ಡೋಟ ಎಂಎಸ್ಪಿಎಲ್ ಪೆಲ್ಲೆಟ್ ಘಟಕದಿಂದ ನಗರದ ಅರ್ಧ ವಾರ್ಡಗಳು ಮಾಲಿನ್ಯ ಬಾಧಿವಾಗುತ್ತಿದ್ದು, ಇಲ್ಲಿರುವ ಜನರ ಮೇಲಾಗುವ ಆರೋಗ್ಯದ ದುಷ್ಪರಿಣಾಮ ತಡೆಯಲು ಈ ಪೆಲ್ಲೆಟ್ ಘಟಕ ಬಂದ್ ಮಾಡಿ, ನಗರದ ಜನರ ಆರೋಗ್ಯ ಉಳಿಸಬೇಕು. ಬಲ್ಡೋಟ ಕಂಪನಿ ಬಸಾಪುರ ಕೆರೆಯನ್ನು ಅನಧಿಕೃತವಾಗಿ ಮಂಜೂರಿ ಪಡೆದಿದ್ದು ಸುತ್ತಲಿನ ಸಾವಿರಾರು ಜಾನುವಾರು ನೀರು ಕುಡಿಯಲು ಕಾಂಪೌಂಡ್ ತೆರವು ಮಾಡಿ ಅವಕಾಶ ಮಾಡಿಕೊಡಬೇಕು. ತುಂಗಭದ್ರಾ ನೀರು ವಿಷಗೊಳಿಸುವ ಮಾಲಿನ್ಯಕಾರಿ ಕಾರ್ಖಾನೆಗಳನ್ನು ಮುಚ್ಛಬೇಕು. ಹಿರೇಬಗನಾಳ, ಅಲ್ಲಾನಗರ ಪಕ್ಕದ ಸ್ಪಾಂಜ್ ಐರನ್ ಕಾರ್ಖಾನೆಗಳನ್ನು ಕೇಂದ್ರ ಪರಿಸರ ಇಲಾಖೆ ವರದಿಯ ಶಿಫಾರಸಿನಂತೆ ನಿರ್ಜನ ಪ್ರದೇಶಕ್ಕೆ ಸ್ಥಳಾಂತರಿಸಬೇಕು. ಸರ್ಕಾರ ಕಾರ್ಖಾನೆ ಧೂಳು ಬಾಧಿತ 22 ಹಳ್ಳಿಗಳ ಪುನರುಜ್ಜೀವನ ಮಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು. ಎ.ಐ.ಐ.ಎಂ.ಎಸ್ ಸಂಸ್ಥೆ ಮತ್ತು ಐ.ಐ.ಎಸ್.ಸಿ ಸಂಸ್ಥೆಯಿಂದ ಜನರ ಆರೋಗ್ಯ ಮತ್ತು ಪರಿಸರ ಹಾನಿಯ ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನೇತೃತ್ವದಲ್ಲಿ ಧರಣಿ ಹೋರಾಟ ನಡೆಸಲಾಯಿತು.

ಧರಣಿಯಲ್ಲಿ ಸಂಚಾಲಕ ಮಲ್ಲಿಕಾರ್ಜುನ ಬಿ. ಗೋನಾಳ, ಪ್ರಕಾಶಕ ಡಿ ಎಂ. ಬಡಿಗೇರ, ಗವಿಸಿದ್ದಪ್ಪ ವದ್ನಾಳ ಬಗನಾಳ, ರಾಜಶೇಖರ ಏಳುಬಾವಿ, ನಿವೃತ್ತ ಪ್ರಾಚಾರ್ಯ ಬಿ.ಜಿ. ಕರಿಗಾರ, ಮಹಾದೇವಪ್ಪ ಮಾವಿನಮಡು, ನಾಗರಾಜ ಕುಷ್ಟಗಿ ಲಾಚನಕೇರಿ, ಬಸವರಾಜಪ್ಪ ಶೆಟ್ಟರ್, ಸತೀಶ ಹುಳ್ಳಿ ಕಿನ್ನಾಳ, ವಿಜಯಮಹಾಂತೇಶ ಹಟ್ಟಿ, ಗಂಗಮ್ಮ ಕುರುಗೋಡು, ಮಂಜುನಾಥ ಕವಲೂರು, ಶಿವಪ್ಪ ಜಲ್ಲಿ, ರಹೀಮ್ ತೆಗ್ಗಿನಮನಿ, ಭೀಮಪ್ಪ ಯಲಬುರ್ಗಾ ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!