Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ನ್ಯಾಷನಲ್ ಎಜುಕೇಶನ್ ಅಕಾಡೆಮಿಯಲ್ಲಿ ಬಸವಣ್ಣ ಜಯಂತಿ: ಯುವಜನತೆಗೆ ಮಾರ್ಗದರ್ಶನ

ಡಿ.ಡಿ. ನ್ಯೂಸ್ : ಬೆಂಗಳೂರು

Advertisement

ವಿಶ್ವಗುರು ಕಾಯಕ ಯೋಗಿ ಹಾಗೂ ಮಹಾನ್ ವಚನಕಾರರಾದ ಶ್ರೀ ಬಸವಣ್ಣ ಅವರ ಜಯಂತಿಯನ್ನು ಇಂದು ನ್ಯಾಷನಲ್ ಎಜುಕೇಶನ್ ಅಕಾಡೆಮಿ ವತಿಯಿಂದ ನಾಗರಬಾವಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

 ಕಾರ್ಯಕ್ರಮದಲ್ಲಿ ಬಸವಣ್ಣ ಅವರ ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳನ್ನು ಸ್ಮರಿಸಿ, ಇಂದಿನ ಸಮಾಜ ನಿರ್ಮಾಣದಲ್ಲಿ ಅವುಗಳ ಅಗತ್ಯತೆಯನ್ನು ವಿಶೇಷವಾಗಿ ಒತ್ತಿಹೇಳಲಾಯಿತು.news_1776852492_0_584.webpಸಂಸ್ಥೆಯ ಅಧ್ಯಕ್ಷರಾದ ಆನಂದ್ ಸಿ ತಿರುಮಲ ಅವರು ಮಾತನಾಡಿ, “ಬಸವಣ್ಣ ಅವರು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪರವಾಗಿದ್ದರು. ಅವರು ಪ್ರತಿಪಾದಿಸಿದ ‘ಕಾಯಕವೇ ಕೈಲಾಸ’ ತತ್ವವು ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿದೆ. ಅವರ ಆದರ್ಶಗಳನ್ನು ಅನುಸರಿಸಿದರೆ ಸಮಾಜದಲ್ಲಿ ಶಾಶ್ವತ ಬದಲಾವಣೆ ತರಲು ಸಾಧ್ಯ,” ಎಂದು ಹೇಳಿದರು.

 ಕಾರ್ಯದರ್ಶಿ ರಂಗನಾಥ್ ಎಲ್ ಪಾತ್ರೊಟಿ ಅವರು ಮಾತನಾಡಿ, “ಬಸವಣ್ಣ ಅವರ ವಚನಗಳು ಕೇವಲ ಸಾಹಿತ್ಯವಲ್ಲ, ಜೀವನದ ದಾರಿದೀಪ. ಅವರ ಚಿಂತನೆಗಳು ಪ್ರತಿಯೊಬ್ಬರ ಬದುಕಿಗೆ ದಿಕ್ಕು ತೋರಿಸುವ ಶಕ್ತಿ ಹೊಂದಿವೆ,” ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ನಿರ್ದೇಶಕರಾದ ಕನ್ಯಾ ಕುಮಾರಿ, ವಿಶ್ವವಿದ್ಯಾಲಯ ಪ್ರಾಧ್ಯಾಪಕರಾದ ರಾಘವೇಂದ್ರ, ಪಿಎಚ್‌ಡಿ ಪದವೀಧರೆ ಮೀನಾಕ್ಷಿ ಎ, ಯುವ ನಾಯಕ ಗಗನ್ ವಿ, ಶಶಿಕಲಾ ಹಾಗೂ ಖ್ಯಾತ ಆಯುರ್ವೇದ ವೈದ್ಯರಾದ ಪಾಂಡುರಂಗ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಸವಣ್ಣ ಜಯಂತಿ ಅಂಗವಾಗಿ ವಿಶೇಷ ಪೂಜೆ, ವಚನ ಪಠಣ ಹಾಗೂ ಚಿಂತನೆಗಳ ವಿನಿಮಯ ಕಾರ್ಯಕ್ರಮವೂ ನಡೆಯಿತು. ಕಾರ್ಯಕ್ರಮವು ಭಕ್ತಿಭಾವ ಮತ್ತು ಶಿಸ್ತಿನೊಂದಿಗೆ ಯಶಸ್ವಿಯಾಗಿ ನೆರವೇರಿತು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!