Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನರಿಗೆ ಅನುಕೂಲ:

ಡಿ.ಡಿ. ನ್ಯೂಸ್ : ಗಂಗಾವತಿ

Advertisement

ತಾಲೂಕಿನ ಬೂದುಗುಂಪ ವಲಯದ ಇಂದರಿಗಿ ಗ್ರಾಮದ ಸಿ.ಎಸ್.ಸಿ ಕೇಂದ್ರದಲ್ಲಿ ಡಿಜೆ ಪ್ಲೇ ಹೊಸ ಯೋಜನೆಯನ್ನು ಒಕ್ಕೂಟದ ಅಧ್ಯಕ್ಷರಾದ ಅಮರೇಶ ಕುಂಬಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಈಗಾಗಲೇ ಜನಸಾಮಾನ್ಯರಿಗಾಗಿ ಅನೇಕ ಸೌಲಭ್ಯಗಳನ್ನು ಒದಗಿಸುತ್ತಾ ಬರುತ್ತಿದೆ. ಅದರಲ್ಲೂ ಹಳ್ಳಿ ಭಾಗದ ಜನರಿಗೆ ಬ್ಯಾಂಕಿಗ್ ಸೇವೆಗಳ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಸೇವೆಗಳನ್ನು ಒದಗಿಸುತ್ತಿದೆ.

CSC ಕೇಂದ್ರಗಳನ್ನು ಹಳ್ಳಿ ಹಳ್ಳಿಗೂ ವಿಸ್ತರಿಸಿ ಸರ್ಕಾರದ ಸೌಲಭ್ಯ ಗಳನ್ನೂ ತ್ವರಿತವಾಗಿ ಮತ್ತು ಫಲಾನುಭವಿಗಳಿಗೆ ಅತ್ಯಂತ ಹತ್ತಿರದಲ್ಲಿದ್ದುಕೊಂಡು ಸೇವೆಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ.ಈವರೆಗೆ ಪಾನ್ ಕಾರ್ಡ್, ಈ ಶ್ರಮ ಕಾರ್ಡ್, ಬೆಳೆವಿಮೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ, ಎನ್.ಪಿ.ಎಸ್, ಎಲ್ಐಸಿ ಭೀಮಾ ಜ್ಯೋತಿ ಯಂತಹ ಪ್ರಮುಖ ವಿಷಯದ ಜೊತೆಗೆ ಹಳ್ಳಿ ಜನರಲ್ಲಿ ವೈಯಕ್ತಿಕ ಖಾತೆ ತೆರೆಸಿ ಹಣಕಾಸು ಶಿಸ್ತು ಹಾಗೂ ಉಳಿತಾಯದ ಮಹತ್ವವನ್ನು ತಿಳಿಸಲಾಗುತ್ತಿದೆ.
ಹಳ್ಳಿ ಜನರು ತಮ್ಮ ಖಾತೆಯಲ್ಲಿನ ಹಣವನ್ನು ದೈನಂದಿನ ಬಳಕೆಗೆ ಡ್ರಾ ಮಾಡಲು ಪಟ್ಟಣಕ್ಕೆ ಹೋಗುವ ಮತ್ತು ಅದಕ್ಕಾಗಿ ಪ್ರಯಾಣಿಸಿ ಅದಕ್ಕೆ ಖರ್ಚು ಮಾಡುವ ಅನಿವಾರ್ಯತೆ ಕಂಡುಕೊಂಡು ಹಳ್ಳಿಗಳಲ್ಲಿಯೇ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ. ಡಿಜೆ ಪ್ಲೇ  ಎಂಬ ವಿಶೇಷ ಕಾರ್ಯಕ್ರಮ ಜಾರಿಗೊಳಿಸಿದೆ. ಇದರಲ್ಲಿ ಹಣ ಸಂಗ್ರಹಣೆ ದಿನದಂದು ಜನರು ತಮ್ಮ  ಬಳಕೆ ಮಾಡಿಕೊಂಡು ಗರಿಷ್ಠ 10000/- ವರೆಗೆ ನಗದು ಪಡೆದುಕೊಳ್ಳುವ ವಿಶೇಷ
ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲೂಕ ನೋಡಲ್ ಅಧಿಕಾರಿ ಮಲ್ಲಿಕಾರ್ಜುನ, ವಲಯ ಮೇಲ್ವಾಚಾರಕರು,  ಆಶಾ ಕಾರ್ಯಕರ್ತರಾದ ಭಾಗ್ಯಶ್ರೀ, ಮಂಜುಳಾ ಎಮ್ಮಿ, ಸೇವಾ ಪ್ರತಿನಿಧಿಗಳು, ಸಂಘದ ಸದಸ್ಯರು, ಗ್ರಾಮದ ಜನರು ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!