Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ತುಂಗಭದ್ರಾ ನದಿಯಲ್ಲಿ ತೇಲುತ್ತಿದ್ದ ಶವ ಹೊರತೆಗೆಯಲು ಪೊಲೀಸರ ಗಡಿ ಗೊಂದಲ.

ಡಿ.ಡಿ.ನ್ಯೂಸ್ ಹೊಸಪೇಟೆ-ಕೊಪ್ಪಳ

Advertisement

ಪೊಲೀಸರ ನಡೆಗೆ; ಸಾರ್ವಜನಿಕರ ಆಕ್ರೋಶ

ಹೊಸಪೇಟೆ, ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಸುಮಾರು 40 ವರ್ಷದ ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ಶವವಿರುವ ಸ್ಥಳ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಎರಡು ಜಿಲ್ಲೆಗಳ ಪೊಲೀಸರು ಗಡಿ ವಾಗ್ವಾದಕ್ಕಿಳಿದ ಘಟನೆ ವಿಜಯನಗರ-ಕೊಪ್ಪಳ ಗಡಿಭಾಗದಲ್ಲಿ ಶುಕ್ರವಾರ ನಡೆದಿದೆ.

ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳಿಗೆ ತುಂಗಭದ್ರಾ ನದಿಯು ಗಡಿಯಾಗಿದ್ದು, ಉಭಯ ಜಿಲ್ಲೆಗಳು ನದಿಯ ಅರ್ಧಭಾಗವನ್ನು ಹಂಚಿಕೊಂಡಿವೆ. ಶುಕ್ರವಾರ ಬುಕ್ ಸಾಗರ ಸೇತುವೆಯ ಸಮೀಪ ನದಿಯಲ್ಲಿ ಶವ ತೇಲಿ ಬಂದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ನದಿ ತೀರದಲ್ಲಿ ಸಾರ್ವಜನಿಕರು ಕಿಕ್ಕಿರಿದು ನಿಂತಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಿಜಯನಗರ ಜಿಲ್ಲೆಯ ಕಮಲಾಪುರ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯ ಸಿಬ್ಬಂದಿ, ಮೊದಲು ಮಾನವೀಯತೆ ಮೆರೆದು ಶವವನ್ನು ಹೊರತೆಗೆಯುವ ಬದಲು ಸ್ಥಳಾಧಿಕಾರ (ವ್ಯಾಪ್ತಿ) ಕುರಿತು ಕೆಲ ಕಾಲ ವಾಗ್ವಾದ ನಡೆಸಿದರು. ಶವ ಬಿದ್ದಿರುವ ಜಾಗ ತಮಗೆ ಸೇರಿದ್ದಲ್ಲ ಎಂದು ಉಭಯ ಠಾಣೆಯ ಪೊಲೀಸರು ಗೊಂದಲ ಸೃಷ್ಟಿಸಿಕೊಂಡಿದ್ದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಕೊನೆಗೆ ಕಮಲಾಪುರ ಪೊಲೀಸರು ಸ್ಥಳೀಯ ಮೀನುಗಾರರ ಸಹಾಯವನ್ನು ಪಡೆದು ಶವವನ್ನು ನದಿಯಿಂದ ಹೊರತೆಗೆಸಿದ್ದಾರೆ. ಮೃತನ ಗುರುತು ಇನ್ನು ಪತ್ತೆಯಾಗಿಲ್ಲ. ಈ ಘಟನೆ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!