Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳ ಸೇರ್ಪಡೆಗೆ ಸುಳಿವು ಕೊಟ್ಟ ಡಿಕೆಶಿ.

ಡಿ.ಡಿ. ನ್ಯೂಸ್ : ಬೆಂಗಳೂರು

Advertisement

ಮುಖಪುಟ /ರಾಜ್ಯ

ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳ ಸೇರ್ಪಡೆಗೆ ಸುಳಿವು ಕೊಟ್ಟ ಡಿಕೆಶಿ

ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳ ಸೇರ್ಪಡೆಗೆ  ಸುಳಿವು ಕೊಟ್ಟ ಡಿಕೆಶಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ  ಕಸರತ್ತಿನ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊಸಬರಿಗೆ ಮಣೆ ಹಾಕುವ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.

ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ತಮ್ಮ ಸರ್ಕಾರಿ ನಿವಾಸದಲ್ಲಿ ಇಂದು ದರ್ಗಾದ ಧರ್ಮಗುರುಗಳು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ಸೌಜನ್ಯಯುತ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಆಲೋಚನೆ ನಡೆದಿರುವುದನ್ನು ಬಹಿರಂಗಪಡಿಸಿದರು.

ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಆಲೋಚನೆ ಪ್ರಗತಿಯಲ್ಲಿದೆ. ನಾನು ಯಾರ ಪ್ರಗತಿ ಅಥವಾ ಅವಕಾಶವನ್ನು ತಡೆಯಲು ಬಯಸುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದೇ ನಮ್ಮ ಆಶಯ ಎಂದು ಡಿ.ಕೆ. ಶಿವಕುಮಾರ್ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ಹೈಕಮಾಂಡ್ ವಹಿಸಿಕೊಂಡಿದೆ. ಈಗಾಗಲೇ ನವದೆಹಲಿಯಲ್ಲಿ ಈ ಕುರಿತು ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ” ಎಂದು ಮಾರ್ಮಿಕವಾಗಿ ನುಡಿದರು.

ಸಿಎಂ ಡಿಕೆಶಿ ಅವರ ಈ ಹೇಳಿಕೆಯು ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿಸಿದ್ದು, ಸದ್ಯದಲ್ಲೇ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!