Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

8 ದಿನದ ಸಾಂಸ್ಕೃತಿಕ ಸಪ್ತಾಹಕ್ಕೆ ಕಲಾವಿದರಿಗೆ ಕರೆ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

ಕೊಪ್ಪಳ ಜಿಲ್ಲಾ ಸಾಂಸ್ಕೃತಿಕ ಪ್ರವಾಸೋದ್ಯಮ ಸಪ್ತಾಹ, ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ 12ನೇ ಸಮ್ಮೇಳನ, 76ನೇ ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಹಾಗೂ 12ನೇ ರಾಷ್ಟ್ರೀಯ ನೃತ್ಯ ಕಲಾಮೇಳದ ರೂಪರೇಖೆಯು ಸಂಪೂರ್ಣ ಬದಲಾಗಲಿದ್ದು, ಜಿಲ್ಲೆಯ ಕುಷ್ಟಗಿ, ಗಂಗಾವತಿ, ಯಲಬುರ್ಗಾ, ಕೊಪ್ಪಳದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ನಾಲ್ಕು ತಾಲ್ಲೂಕಿನಲ್ಲಿ ತಲಾ 2 ದಿನದಂತೆ, ಒಟ್ಟು 8 ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಆಯಾ ತಾಲ್ಲೂಕಿನ ಕಲಾವಿದರು, ನೃತ್ಯಗಾರರು, ಗಾಯಕರು, ಸಂಗೀತ, ಏಕಪಾತ್ರಾಭಿನಯ, ಕವನ ವಾಚನ, ಚಿತ್ರಕಲಾ ಪ್ರದರ್ಶನ, ಕರಕುಶಲ ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಜನಪದ ಮೂಲ ಗೀತೆಗಳ ಕಲಾವಿದರು ಸೇರಿದಂತೆ, ಎಲ್ಲಾ ಕಲಾ ಪ್ರಕಾರಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ತಮ್ಮ ತಾಲ್ಲೂಕಿನಲ್ಲಿ ನಡೆಯುವಾಗ ಭಾಗವಹಿಸಬಹುದು. ಕೂಡಲೇ ತಮ್ಮ 2 ಭಾವಚಿತ್ರ, ಒಂದು ಪುಟ ಸಾಧನೆಯ ಮಾಹಿತಿ, ದೂರವಾಣಿ ಮತ್ತು ವಿಳಾಸದೊಂದಿಗೆ ನೋಂದಣಿ ಮಾಡಿಕೊಳ್ಳುಬಹುದು. ವಾಟ್ಸಾಪ್ ಮೂಲಕ ಅರ್ಜಿಯನ್ನು ಪಡೆದು, ಭರ್ತಿ ಮಾಡಿ, ಬೆಂಗಳೂರಿನ ಕೇಂದ್ರ ಕಛೇರಿಗೆ ಕಳುಹಿಸಬೇಕು. news_1777387202_0_751.webp

ಈ ಕಾರ್ಯಕ್ರಮವು ಪ್ರತಿ ತಾಲ್ಲೂಕಿನ 2 ದಿನಗಳಂತೆ ನಡೆಯಲಿದ್ದು, 2026ನೇ ಸಾಲಿಗೆ ಸಂಸ್ಥೆಯ ಗೌರವ ಅಧ್ಯಕ್ಷರಾಗಿ ಸಹಕಾರಿ ಧುರಿಣ, ಸಾಹಿತಿ, ಕಸಪಾ ಮಾಜಿ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಕಾರ್ಯನಿರ್ವಹಿಸಲಿದ್ದಾರೆ. ಮೇಲ್ಕಂಡ ಸಮ್ಮೇಳನದಲ್ಲಿ ವಿಶ್ವೇಶ್ವರಯ್ಯ ಪ್ರತಿಷ್ಠಾನದ ಸದಸ್ಯತ್ವದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಎಲ್ಲಾ ವಯಸ್ಸಿನ ಕಲಾವಿದರಿಗೆ ಅವಕಾಶವಿದ್ದು, ಆಯ್ಕೆಯಾದ ಎಲ್ಲರಿಗೂ "ಕರುನಾಡ ಕಲಾ ಕಣ್ಮಣಿ ರಾಜ್ಯ ಪ್ರಶಸ್ತಿ ಅಥವಾ ಅರ್ಜಿಯ ಹಿಂಭಾಗದಲ್ಲಿರುವ ಯಾವುದೇ ಪ್ರಶಸ್ತಿಯನ್ನು ಆಯ್ಕೆ ಮಾಡಿಕೊಳ್ಳಬಹುದು.

ಒಂದು ಸಾವಿರ ರೂ. ಸದಸ್ಯತ್ವದ ಶುಲ್ಕವಿದ್ದು, ಸದಸ್ಯರಾದವರಿಗೆ ರಾಜ್ಯಮಟ್ಟದ ಪ್ರಶಸ್ತಿಯ ಜೊತೆಗೆ ಒಂದು ನೆನಪಿನ ಕಾಣಿಕೆ, ಹಾರ, ಶಾಲು, ಪ್ರಶಸ್ತಿ ಪತ್ರ ಮತ್ತು ಸದಸ್ಯತ್ವದ ಐಡಿ ಕಾರ್ಡ್ ನೀಡಿ ಗೌರವಿಸಲಾಗುವುದು. ಭಾಗವಹಿಸುವ ಕಲಾವಿದರು ಕಡ್ಡಾಯವಾಗಿ 2 ಅವಧಿಯ ಕಾರ್ಯಕ್ರಮದಲ್ಲಿ, ಒಂದು ಅವಧಿಗೆ ರಂಗಮಂದಿರದಲ್ಲಿರಬೇಕಾಗಿದ್ದು ಅತ್ಯಾವಶ್ಯಕ. ಕಾರ್ಯಕ್ರಮ ಮೊದಲ ಅವಧಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 2 ಗಂಟೆಯವರೆಗೆ, ಎರಡನೇ ಅವಧಿ 1.30 ರಿಂದ ರಾತ್ರಿ 9.30 ರವರೆಗೆ ನಡೆಯುತ್ತದೆ. ಅರ್ಜಿಯನ್ನು ಕೂಲಂಕುಶವಾಗಿ ಪರಿಶೀಲಿಸಿ, ತುಂಬಿ ಕೆಳಕಂಡ ವಿಳಾಸಕ್ಕೆ ಕಳುಹಿಸಿ.

ಕಛೇರಿ ವಿಳಾಸ : ರಮೇಶ ಸುರ್ವೆ ಅಧ್ಯಕ್ಷರು, ವಿಶ್ವೇಶ್ವರಯ್ಯ ಪ್ರತಿಷ್ಠಾನ (ರಿ.). ನಂ. 468/ಸುರ್ವೆ, 13ನೇ ಮುಖ್ಯರಸ್ತೆ, 3ನೇ ಹಂತ, ಮೋದಿ ಸರ್ಕಲ್-ತಿಮ್ಮಯ್ಯ ರಸ್ತೆ, ಮಂಜುನಾಥನಗರ, ಬೆಂಗಳೂರು-560010. ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಾಗಿ 9845307327 ನಂಬರ್‌ಗೆ ಕರೆ ಮಾಡಿ ಪಡೆಯಿರಿ. ಕಾರ್ಯಕ್ರಮವು ಅಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್‌ನಲ್ಲಿ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!