Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿ

ಡಿ.ಡಿ. ನ್ಯೂಸ್ ಕೊಪ್ಪಳ

Advertisement
ಕೊಪ್ಪಳ: ತುಂಗಭದ್ರಾ ಜಲಾಶಯದ 33 ಸ್ವಿಲ್‌ವೇ ಗೇಟುಗಳ ಲೋಕಾರ್ಪಣೆಗೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಯವರು ಏಲಕ್ಕಿ ಹಾರ ಹಾಕಿ ಸ್ವಾಗತ ಮಾಡುವುದನ್ನು ಡಿಕೆಶಿ ನಿರಾಕರಿಸಿರುವುದು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಕಳೆದ ವರ್ಷ ತುಂಗಭದ್ರಾ ಜಲಾಶಯದ 33 ಸ್ಟೀಲ್ ಗೇಟು ಗಳು ಕೊಚ್ಚಿ ಹೋಗಿದ್ದವು. ಒಂದು ವರ್ಷದಲ್ಲಿ ಪುನರ್ ಅಳವಡಿಸಿದ ಬಳಿಕ ಜೂ.25 ರಂದು ಮುನಿರಾಬಾದಿನಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ದ ಮುಖ್ಯಮಂತ್ರಿ ಗಳು ಒಂದೇ ವೇದಿಕೆಯಲ್ಲಿ ಸಮಾ ಗಮವಾಗುವ ಮೂಲಕ ಐತಿ ಹಾಸಿಕ ಕ್ಷಣಕ್ಕೆ ಸಾಕ್ಷಿ ಯಾದರು. ಮುನಿರಾಬಾದ್‌ನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ರಾಜ್ಯ ಸರ್ಕಾರದ ಜಲಸಂಪನ್ಮೂಲೆ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ 'ತುಂಗ ಭದ್ರಾ ಜಲಾಶಯದ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ'ಗೊಳಿಸಲು ಸಿಎಂ ಡಿಕೆ ಶಿವಕುಮಾರ ಆಗಮಿಸಿದ್ದರು. ಈ ವೇಳೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೇರಿದಂತೆ ಇತರೆ ಅಧಿಕಾರಿಗಳು ಹೂಗುಚ್ಛ ನೀಡಿ, ಸಿಎಂ ಅವರನ್ನು ಸ್ವಾಗತಿಸಿದರು. ಬಳಿಕ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರು ಹಸ್ತ ಲಾಘವ (ಕೈ ಕುಲುಕಿ) ಏಲಕ್ಕಿ ಹಾರವನ್ನು ಹಾಕಲು ಮುಂದಾದರು. ರಾಯರಡ್ಡಿ ಯವರ ಗೌರವವನ್ನು ತಿರಸ್ಕರಿಸಿದಲ್ಲದೇ ರಾಯರಡ್ಡಿ ಯನ್ನು ಮುಂದೆ ಹೋಗುವಂತೆ ಸೂಚಿಸಿರುವುದು ಆಶ್ಚರ್ಯಕ್ಕೆ ಕಾರಣವಾಯಿತು. 

ತೆಲಂಗಾಣ ನ ಸಿಎಂ ರೇವಂತ ರೆಡ್ಡಿ ಯನ್ನು ರಾಯರಡ್ಡಿ ಆತ್ಮೀಯ ವಾಗಿ ಸ್ವಾಗತ ಮಾಡಿಕೊಂಡರು. ಆದರೆ, ರಾಜ್ಯದ ಮುಖ್ಯಮಂತ್ರಿ ಡಿಕೆಶಿ ಮಾತ್ರ ರಾಯರಡ್ಡಿ ಗೌರವ ತಿರಸ್ಕರಿಸಿರುವುದು ಅಚ್ಚರಿಗೆ ಕಾರಣವಾಗಿದೆ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!