Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

180ನೇ ದಿನ ಪೂರ್ಣಗೊಳಿಸಿದ ಬಲ್ಡೋಟ ಕಾರ್ಖಾನೆ ತೊಲಗಿಸಿ ಧರಣಿ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

ಬೇಸಿಗೆಯ ದಾಹ ತೀರಿಸಲು ಬಸಾಪುರ ಕೆರೆ ಜಾನುವಾರುಗಳಿಗೆ ಮುಕ್ತಗೊಳಿಸಿ: ಮುಜುಮದಾರ

ಕೊಪ್ಪಳ: ನಗರಸಭೆ ಮುಂದಿನ ಬಲ್ಬೋಟ ಕಾರ್ಖಾನೆ ತೊಲಗಿಸಿ ಕೊಪ್ಪಳ ಉಳಿಸಿ ಧರಣಿ 180ನೇ ದಿನದಲ್ಲಿ ಯಶಸ್ವಿಯಾಯಿತು. ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ನೇತೃತ್ವದಲ್ಲಿ ನಡೆದ ಧರಣಿ ವೇದಿಕೆಯಲ್ಲಿ ಮಹಿಳಾ ಮುಖಂಡರಾದ ಸಾವಿತ್ರಿ ಮುಜುಮದಾರ ಮಾತನಾಡಿ, ಈ ಧಗಧಗ ಉರಿಯುತ್ತಿರುವ ಬಿರುಬಿಸಿಲಿಗೆ ಜನ, ಜಾನುವಾರು ಬಸವಳಿದು ಹೋಗಿವೆ. ನದಿ, ಹಳ್ಳ, ಕೆರೆ, ಕಟ್ಟೆ ಇವೆಲ್ಲವುಗಳು ನಾಡಿನ ಸಂಪತ್ತು. ಸಾರ್ವಜನಿಕ, ಸಮುದಾಯದ ಆಸ್ತಿ. ಇವುಗಳ ಮೇಲೆ ಗ್ರಾಮೀಣ ಜನರ ಸಂಪೂರ್ಣವಾದ ಹಕ್ಕು ಇದೆ. ಬಸಾಪುರ ಕೆರೆ ಸಮುದಾಯದ ಆಸ್ತಿ. ಸಾವಿರಾರು ಜಾನುವಾರು, ಕುರಿ, ಮೇಕೆ ಬೇಸಿಗೆಯ ನೀರಿನ ದಾಹಕ್ಕೆ ಬಾಯಿತೆರೆದಾಗಲೂ ಕಾರ್ಖಾನೆಯವರು ಕಾಂಪೌಂಡ್ ಕಟ್ಟಿ ಕೆರೆಯನ್ನು ಕಬ್ಜಾದಲ್ಲಿ ಇಟ್ಟುಕೊಂಡು ಮಾನವೀಯತೆ ಮರೆತಿರುವುದನ್ನು ಖಂಡಿಸೋಣ. ಬಸಾಪುರ ಕೆರೆ ಜಾನುವಾರು ನೀರು ಕುಡಿಯಲು ಮುಕ್ತವಾಗಿಡಲು ಜಿಲ್ಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಂಪನಿಗೆ ಬುದ್ದಿ ಹೇಳಬೇಕು. ಹೈಕೋರ್ಟ್ ಆದೇಶವಿದ್ದರೂ ಯಾಕೆ ಹಿಂಜರಿಕೆ ಎಂದು ಪ್ರಶ್ನಿಸಿದರು. news_1777387657_0_793.webp

ಇನ್ನೊಬ್ಬ ಸಾಮಾಜಿಕ ಹೋರಾಟಗಾರ್ತಿ ಸರೋಜಾ ಬಾಕಳೆ ಮಾತನಾಡಿ, ಜೀವ, ಆರೋಗ್ಯ ಉಳಿಸಿಕೊಳ್ಳುವ ಈ ಹೋರಾಟಕ್ಕೆ ಸರ್ವ ಜನರು ಬೆಂಬಲಕ್ಕೆ ಬರಬೇಕು ಎಂದರು. ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಡಾ. ಮಂಜುನಾಥ ಸಜ್ಜನ್, ಮಹಿಳಾ ನಾಯಕಿ ಕಾವ್ಯಾ ಗಡಾದ, ರಾಜ್ಯ ರೈತ ಸಂಘದ ಮುಖಂಡ ಭೀಮಸೇನ ಕಲಕೇರಿ, ಶಿವಪ್ಪ ದೇವರಮನಿ ಬಗನಾಳ, ಮಹೇಶ ವದ್ನಾಳ ಬಗನಾಳ, ಗವಿಸಿದ್ದಪ್ಪ ಪುಟಗಿ ಬಗನಾಳ, ಜಗದೀಶ ಕುಂಬಾರ ಬಗನಾಳ, ಗಣೇಶ ವಿಶ್ವಕರ್ಮ, ಕೊಟ್ರಪ್ಪ ಪಲ್ಲೇದ ಬಗನಾಳ, ದೇವಪ್ಪ ಬಗನಾಳ, ಮೂಕಪ್ಪ ಮೇಸ್ತ್ರಿ ಬಸಾಪುರ, ರವಿ ಕಾಂತನವರ, ಶಂಭುಲಿಂಗಪ್ಪ ಹರಗೇರಿ, ರಾಜಶೇಖರ ಏಳುಬಾವಿ, ಯಮನೂರಪ್ಪ ಹಾಲಳ್ಳಿ ಬಸಾಪುರ, ಮಹಾದೇವಪ್ಪ ಮಾವಿನಮಡು, ಶರಣು ಶೆಟ್ಟರ್, ನಾಗರಾಜ ಕುಷ್ಟಗಿ, ಬಿ.ಜಿ.ಕರಿಗಾರ, ವಿಜಯಮಹಾಂತೇಶ ಹಟ್ಟಿ, ರತ್ನಮ್ಮ, ಭೀಮಪ್ಪ ಯಲಬುರ್ಗಾ ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!