Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡದೆ ಎಲ್ಲ ಸದಸ್ಯರಿಗೆ ಸಮಾನವಾಗಿ ಹಂಚಿಕೆಮಾಡಬೇಕು

ಡಿ.ಡಿ. ನ್ಯೂಸ್ : ಕುರುಗೋಡು

Advertisement

ಕುರುಗೋಡು ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡದೆ ಎಲ್ಲ ಸದಸ್ಯರಿಗೆ ಸಮಾನವಾಗಿ ಹಂಚಿಕೆಮಾಡಬೇಕು. ಸದಸ್ಯರು ವಾರ್ಡ್ಗಳಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಮಸ್ಯೆಯಾಗುತ್ತದೆ ಎಂದು ಬಿಜೆಪಿ ಸದಸ್ಯರು ಅಸಮಾದಾನ ವ್ಯಕ್ತಪಡಿಸಿದರು.

ಇಲ್ಲಿನ ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಜರುಗಿದ ಸಮಾನ್ಯಸಭೆಯಲ್ಲಿ ಒತ್ತಾಯಿಸಿದರು.

ಕೆಲವು ವಾರ್ಡ್ಗಳಿಗೆ ಪುರಸಭೆ ಸರಬರಾಜು ಮಾಡುವ ನೀರು ಸಮರ್ಪಕವಾಗಿ ತಲುಪುತ್ತಿಲ್ಲ. ಎಲ್ಲ ವಾರ್ಡ್ಗಳಿಗೆ ಸಮರ್ಪಕವಾಗಿ ನೀರು ಸರಬರಾಜುಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸದಸ್ಯ ನರಸಪ್ಪ ಯಾದವ್ ಒತ್ತಾಯಿಸಿದರು. ೨ನೇ ವಾರ್ಡ್ಗೆ ಕಲುಷಿತ ನೀರು ಸರಬರಾಜುಗೊಳ್ಳುತ್ತಿಗೆ ವೃದ್ಧರು, ಚಿಕ್ಕಮಕ್ಕಳು ಸೇವಿಸಿ ಏನಾದರೂ ಆರೋಗ್ಯ ಸಮಸ್ಯೆ ಉಂಟಾದರೆ ಯಾರು ಜವಾಬ್ದಾರರು ಎಂದು ಸದಸ್ಯೆ ಶಾಂತಮ್ಮ ನೀರಿನ ಸಮಸ್ಯೆಗೆ ಧನಿಗೂಡಿಸಿದರು.news_1780066688_0_102.webpಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಪ್ರತಿಕ್ರಿಯಿಸಿ, ಬೇಸಿಗೆಯಲ್ಲಿ ಕಾಲುವೆ ನೀರು ದೊರೆಯದ ಪರಿಣಾಮ ಪೂರ್ಣಪ್ರಮಾಣದಲ್ಲಿ ಕೆರೆ ತುಂಬಿಸಲು ಸಾಧ್ಯವಾಗಲಿಲ್ಲ.ಕೆರೆ ತುಂಬಿದರೂ ಕೇವಲ ೭೫ ದಿನ ಮಾತ್ರ ನೀರು ಸರಬರಾಜು ಮಾಡಲು ಸಾಧ್ಯ. ಇಂದಿನ ಜನಸಂಖ್ಯೆಗೆ ಇರುವ ಕೆರೆಯ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ಕರೆಯ ಅಗತ್ಯವಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.

ಮಳೆ ಬಂದರೆ ಚರಂಡಿ ತುಂಬಿ ಕಲುಷಿತ ನೀರು ಮನೆಗಳಿಗೆ ನುಗ್ಗಿತ್ತಿವೆ. ವಿಷ ಜಂತುಗಳ ಹಾವಳಿ ಹೆಚ್ಚಾಗಿದೆ. ಚರಂಡಿ ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು ಎಂದು ಸದಸ್ಯೆ ಕೆ.ಸಿ. ಲಲಿತಮ್ಮ ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರು.

ಗೆಣಿಕೆಹಾಳು ರಸ್ತೆಯಲ್ಲಿರುವ ಕಳಸ ವೈನ್ಸ್ ಮುಂದೆ ಜನಸಂದಣಿ ಹೆಚ್ಚಾಗುತ್ತಿರುವುದರಿಂದ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ಪುರಸಭೆ ಪಕ್ಕದಲ್ಲಿರುವ ತಾಲ್ಲೂಕು ಪಂಚಾಯಿತಿಗೆ ಸೇರಿದ ಜಾಗದಲ್ಲಿ ಜನರು ಅನಧಿಕೃತವಾಗಿ ಗೂಡಂಗಡಿಗಳನ್ನು ಇಟ್ಟುಕೊಂಡಿದ್ದಾರೆ. ಅವುಗಳನ್ನು ತೆರುವುಗೊಳಿಸಬೇಕು. ಅಮೃತ ಯೋಜನೆಯ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಚುರುಕು ನೀಡಬೇಕು ಎನ್ನುವ ವಿಷಯಗಳು ಚರ್ಚೆಗೆ ಗ್ರಾಸವಾದವು.

ಪುರಸಭೆ ಅಧ್ಯಕ್ಷ ಜಿ.ಮಂಜುನಾಥ, ಉಪಾಧ್ಯಕ್ಷೆ ನಾಗವೇಣಿ, ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!