ಬೆಂಗಳೂರು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಮತ್ತು ಕಾಂಗ್ರೆಸ್ ಹೈಕಮಾಂಡ್ ಮಟ್ಟದ ದಿಢೀರ್ ಬೆಳವಣಿಗೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಅತ್ಯಂತ ಭಾವುಕ ಕ್ಷಣಗಳು ಮೂಡಿಬಂದಿವೆ.
ಗುರುವಾರ ಬೆಳಗ್ಗೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಈ ಅಪರೂಪದ ದೃಶ್ಯ ಸಾಕ್ಷಿಯಾಗಿದೆ. ಬೆಳಗ್ಗೆ ಉಪಹಾರ ಕೂಟದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅತ್ಯಂತ ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಇಬ್ಬರೂ ನಾಯಕರ ನಡುವೆ ಸದಾ ಪೈಪೋಟಿ ಇರುತ್ತದೆ ಎಂಬ ವದಂತಿಗಳ ಬೆನ್ನಲ್ಲೇ, ಈ ನಡೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಒನ್ ಟು ಒನ್ ಗುಪ್ತ ಆಲೋಚನೆ ಉಪಹಾರದ ಬಳಿಕ ಇಬ್ಬರೇ ನಾಯಕರು ಪ್ರತ್ಯೇಕ ಕೊಠಡಿಯಲ್ಲಿ ಕುಳಿತು ಸುಮಾರು ಹೊತ್ತು 'ಒನ್ ಟು ಒನ್' ರಹಸ್ಯ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. ಈ ವೇಳೆ ಹೈಕಮಾಂಡ್‌ನಿಂದ ಬಂದಿರುವ ಸಂದೇಶಗಳು, ಮುಂದಿನ ಅಧಿಕಾರ ಹಸ್ತಾಂತರದ ಸೂತ್ರಗಳು ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ಮಹತ್ವದ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಡಿಸಿಎಂ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಆದರೆ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಏನಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.?
ರಾಜ್ಯದ ಸುಧೀರ್ಘ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ರಾಜೀನಾಮೆ ಯಿಂದಾಗಿ ತೆರವಾಗುವ ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ ನಿರ್ಧಾರ ದಂತೆ ಡಿಕೆಶಿಗೆ ಸಿಎಂ ಪಟ್ಟ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಸಾಧ್ಯವೆಂದು ಸದಾ ಸುದ್ದಿ ಯಲ್ಲಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆಯಾದರೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಲಿ ಎಂದು ಡಿಕೆಶಿ ಬಗ್ಗೆ ಅಸಮಧಾನ ಹೊರ ಹಾಕಿದ್ದರು. ಒಂದು ವೇಳೆ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಖಚಿತವಾದರೇ ರಾಯರೆಡ್ಡಿಗೆ ಯಾವುದೇ ಸ್ಥಾನಮಾನಗಳು ದೊರೆಯುವುದಿಲ್ಲ. ಮತ್ತು ಈಗಿರುವ ಆರ್ಥಿಕ ಸಲಹೆಗಾರ ಹುದ್ದೆಯಿಂದ ವಂಚಿತರಾಗುತ್ತಾರೆ ಎಂಬ ರಾಜಕೀಯ ತಜ್ಞರ ಅಭಿಪ್ರಾಯವಾಗಿದೆ.
