Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಪ್ರಮೀಳಾ ಎಂ.

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ: ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳನ್ನು ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಪ್ರಮೀಳಾ ಎಂ. ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರದ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ, ಅರಣ್ಯ ನಾಶ ಮತ್ತು ಹವಾಮಾನ ವೈಪರೀತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಎಲ್ಲರೂ ಅರಿತುಕೊಳ್ಳಬೇಕಾಗಿದೆ ಎಂದು ಹೇಳಿದರು.news_1780671035_0_128.webpಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಪಚ್ಚಪುರೆ ಮಾತನಾಡಿ, ಪರಿಸರ ಸಂರಕ್ಷಣೆಯು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ ಪ್ರತಿಯೊಬ್ಬರ ನಿತ್ಯ ಜೀವನದ ಭಾಗವಾಗಬೇಕು. ಮರಗಳು ಜೀವ ಸಂಕುಲದ ಆಧಾರವಾಗಿದ್ದು, ಅವುಗಳ ಸಂರಕ್ಷಣೆಯಿಂದ ಮಾತ್ರ ಸ್ವಚ್ಛ ಗಾಳಿ, ಸಮರ್ಪಕ ಮಳೆ ಹಾಗೂ ಆರೋಗ್ಯಕರ ಬದುಕು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿ ಹಸಿರು ವಾತಾವರಣ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಹೊಂಬಾಳ್, ತಹಸೀಲ್ದಾರ್ ಪ್ರಕಾಶ್ ನಾಸಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಗೀತಾ ಅಸೂಟಿ, ವಲಯ ಅರಣ್ಯಾಧಿಕಾರಿ ಬಸವರಾಜ್ ಗೋಗಿರಿ, ಬಾಬುರಾವ್, ವಕೀಲರಾದ ಸಿ.ಎಸ್. ಬನ್ನಪ್ಪಗೌಡ್ರು, ಎಸ್.ಸಿ. ಗದಗ್, ಆರ್.ಜಿ. ನಿಂಗೋಜಿ, ಅಯ್ಯರ್ ಕೆಂಚಮ್ಮನವರ್, ಜಿ.ಕೆ. ಲಾಲಗೊಂಡರು, ಎ.ಎಂ. ಪಾಟೀಲ್, ಕೆ.ಆರ್. ಬೆಟಿಗೇರಿ, ಎಸ್.ಜಿ. ಅಂಗಡಿ, ಸಾವಿತ್ರಿ ಗೊಲ್ಲರು, ಎ.ಬಿ. ಬೋರಣ್ಣವರ್, ಬಸವರಾಜ್ ಕಡಬಲಕಟ್ಟಿ, ಮಂಜುನಾಥ್ ಕಮ್ಮಾರ್ ಹಾಗೂ ಸಮಿತಿಯ ಸಿಬ್ಬಂದಿಗಳಾದ ರಾಘವೇಂದ್ರ ಕೋಳಿಹಾಳ್ ಮತ್ತು ವಿನಾಯಕ್ ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!