Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಟಿ.ಕೃಷ್ಣಮೂರ್ತಿ

ಡಿ.ಡಿ.ನ್ಯೂಸ್ ಯಲಬುರ್ಗಾ

Advertisement

ಬೇವೂರ ಪ್ರೌಢ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆಯಲ್ಲಿದೆ 

ಯಲಬುರ್ಗಾ: ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ಹೇಳಿದರು.

ತಾಲೂಕಿನ ಬೇವೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತಿಯ ಆಶ್ರಯದಲ್ಲು ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ,  ಶುಕ್ರವಾರ ಮಾತನಾಡಿದರು. ಪರಿಸರ ಪ್ರತಿಯೊಬ್ಬ ಜೀವ ಕೋಶಗಳ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿ ಗಾಳಿ, ನೀರು, ಮರಗಳು,ಕಾಡುಗಳು, ಸಾಗರಗಳು ಪ್ರತಿಯೊಂದು ಬಹಳ ಮುಖ್ಯ.ಈ ಪರಿಸರವು ಯುಗ ಯುಗಗಳವರೆಗೂ ಹೀಗೆ ಉಳಿಯಬೇಕಾಗಿದೆ. ಆದ್ದರಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುವುದು ಬಹಳ ಮುಖ್ಯವಾಗಿದೆ  ಹಾಗೂ ಪರಿಸರವನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನೀರನ್ನು ವ್ಯರ್ಥ ಮಾಡದೆ ಸಂರಕ್ಷಿಸುವುದು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ವಿಶ್ವದಾದ್ಯಂತ ಸುಮಾರು 143 ದೇಶಗಳಲ್ಲಿ ವಿಶ್ವ ಪರಿಸರ ದಿನ ಆಚರಿಸುತ್ತಾ ಬಂದಿದೆ. ಪರಿಸರ ಕಾಳಜಿ ಜೊತೆಗೆ ಜನರಿಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು ವಿಶ್ವ ಸಂಸ್ಥೆ ಸ್ಥಾಪಿಸಿತು.1947 ರಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ನಿರ್ಧಿಷ್ಟ ಥೀಮ್ ನೊಂದಿಗೆ ಆಚರಿಸುತ್ತಾ ಬಂದಿದೆ ಎಂದು ತಿಳಿಸಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ ಗಫಾರ, ಆಡಳಿತಾಧಿಕಾರಿಗಳು, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಮಹಿಳಾ ಸಂಘದ ಅಧ್ಯಕ್ಷರು, ಎಂಬಿಕೆ, ವಿ ಆರ್ ಡಬ್ಲ್ಯೂ, ಗ್ರಂಥಪಾಲಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!