Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಹಿರೇಮ್ಯಾಗೇರಿ ಪ್ರೀಮಿಯರ್ ಲೀಗ್-3 ಧೃತಿ ಡೇರ್‌ಡೆವಿಲ್ಸ್‌ಗೆ ಚಾಂಪಿಯನ್ ಪಟ್ಟ | ಕ್ರೀಡಾಸ್ಪೂರ್ತಿ ಮೆರೆದ ಯುವಕರು

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಹಿರೇಮ್ಯಾಗೇರಿ ಪ್ರೀಮಿಯರ್ ಲೀಗ್ (HPL) 3ನೇ ಆವೃತ್ತಿಯ ಕ್ರಿಕೆಟ್ ಟೂರ್ನಿಯು ಯುವಕರ ಉತ್ಸಾಹ ಹಾಗೂ ಕ್ರೀಡಾಸ್ಪೂರ್ತಿಯ ನಡುವೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಟೂರ್ನಿಯ ಪ್ರಶಸ್ತಿ ವಿತರಣಾ ಸಮಾರಂಭವು ಗ್ರಾಮದ ಪ್ರಮುಖರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.news_1778513355_0_453.webpಗ್ರಾಮದ ಯುವಕರ ಸಹಕಾರ ಮತ್ತು ಕ್ರೀಡಾಭಿಮಾನಿಗಳ ಪ್ರೋತ್ಸಾಹದೊಂದಿಗೆ ಆಯೋಜಿಸಲಾಗಿದ್ದ ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಭಾಗವಹಿಸಿ ಕ್ರೀಡಾಭಿಮಾನಿಗಳಿಗೆ ರೋಚಕ ಪಂದ್ಯಗಳನ್ನು ನೀಡಿದವು. ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದ ಧೃತಿ ಡೇರ್‌ಡೆವಿಲ್ಸ್ ತಂಡ ಫೈನಲ್‌ನಲ್ಲಿ ಅದ್ಭುತ ಆಟದ ಮೂಲಕ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟಕ್ಕೇರಿತು.

ಹರ್ಷಿತ್ ಹಂಟರ್ಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರೆ, ಭೂ-ಸಹನಾ ವಾರಿಯರ್ಸ್ ತಂಡ ತೃತೀಯ ಬಹುಮಾನ ಪಡೆದು ಗಮನಸೆಳೆಯಿತು. ವಿಜೇತ ತಂಡಗಳಿಗೆ ಟ್ರೋಫಿ, ನಗದು ಬಹುಮಾನ ಹಾಗೂ ಸ್ಮರಣಿಕೆಗಳನ್ನು ವಿತರಿಸಲಾಯಿತು.

ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಗ್ರಾಮೀಣ ಭಾಗದ ಯುವಕರಲ್ಲಿ ಕ್ರೀಡಾ ಚಟುವಟಿಕೆಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು ಸಂತಸದ ಸಂಗತಿ. ಇಂತಹ ಕ್ರೀಡಾಕೂಟಗಳು ಯುವಕರಲ್ಲಿ ಸ್ನೇಹ, ಶಿಸ್ತು ಮತ್ತು ಒಗ್ಗಟ್ಟಿನ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಟೂರ್ನಿ ಅವಧಿಯಲ್ಲಿ ಪ್ರತಿದಿನವೂ ಗ್ರಾಮಸ್ಥರು ಹಾಗೂ ಕ್ರಿಕೆಟ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಟಗಾರರನ್ನು ಪ್ರೋತ್ಸಾಹಿಸಿದರು. ಯುವಕರು ಸಂಘಟಿತವಾಗಿ ಕಾರ್ಯಕ್ರಮ ನಡೆಸಿಕೊಟ್ಟ ರೀತಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ಉದ್ದೇಶದಿಂದ ಹಿರೇಮ್ಯಾಗೇರಿ ಪ್ರೀಮಿಯರ್ ಲೀಗ್ ಅನ್ನು ಮುಂದಿನ ವರ್ಷಗಳಲ್ಲಿಯೂ ಇನ್ನಷ್ಟು ವೈಭವದಿಂದ ಆಯೋಜಿಸಲು ಯುವಕರು ತೀರ್ಮಾನಿಸಿದ್ದಾರೆ.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!