Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

* ಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ

* ಭಕ್ತಗಣದಿಂದ ಉದೋ ಉದೋ ಘೋಷ

ಕೊಪ್ಪಳ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವವವು ಮೇ 11ರಂದು ವಿಜ್ರಂಭಣೆಯಿಂದ ನೆರವೇರಿತು.

ಕೊಪ್ಪಳ ತಾಲೂಕಿನ ಸುಕ್ಷೇತ್ರ ಹುಲಿಗಿ ಗ್ರಾಮದಲ್ಲಿ ಗೋಧೂಳಿ ಸಮಯ ಸಂಜೆ ಸರಿಯಾಗಿ 5.30ಕ್ಕೆ ಆರಂಭಗೊಂಡ ರಥೋತ್ಸವದ ಚಾಲನಾ ಸಮಾರಂಭಕ್ಕೆ ಕೊಪ್ಪಳ ಸೇರಿದಂತೆ ಗಡಿ ಜಿಲ್ಲೆ ವಿಜಯನಗರ, ಬಳ್ಳಾರಿ, ಗದಗ, ರಾಯಚೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ಧ ಲಕ್ಷಾಂತರ ಭಕ್ತರು ಸಾಕ್ಷಿಯಾಗಿ ಜಯಘೋಷ ಮೊಳಗಿಸಿದರು.news_1778512368_0_655.webpಜಗನ್ಮಾತೆ ಶ್ರೀ ಹುಲಿಗೆಮ್ಮ‌ದೇವಿ ಮೂರ್ತಿಯೊಂದಿಗೆ ಸಾಗಿದ ತೇರು ಪಾದಗಟ್ಟೆ ತಲುಪಿ ಮರಳಿ ಸ್ವಸ್ಥಾನಕ್ಕೆ ಬಂದು ಸೇರುತ್ತಿದ್ದಂತೆ ಭಕ್ತ ಸಮೂಹದಿಂದ ಕರತಾಡನ ಕೇಳಿ ಬಂದಿತು. ಉದೋ ಉದೋ ಊದೋ.. ಹುಲಿಗೆಮ್ಮ‌ ಎಂದು ಭಕ್ತರು ಮತ್ತೆ ಮತ್ತೆ ಘೋಷಣೆ ಮೊಳಗಿಸಿದರು.

ಸಮಾರಂಭದಲ್ಲಿ ಸಂಸದರಾದ ರಾಜಶೇಖರ ಹಿಟ್ನಾಳ, ಪರಿಷತ್ ಶಾಸಕರಾದ ಹೇಮಲತಾ ನಾಯಕ, ಮಾಜಿ ಸಂಸದರಾದ ಸಂಗಣ್ಣ ಕರಡಿ ಸೇರಿದಂತೆ ಅನೇಕ ಹಿರಿಯ ಗಣ್ಯರು ಭಾಗಿಯಾಗಿ ಪೂಜೆ ಸಲ್ಲಿಸಿದರು.

ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ ಅವರ ಮಾರ್ಗದರ್ಶನದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಶ್ರೀ ಹುಲಿಗೆಮ್ಮ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಹಾಗೂ ಕಾರ್ಯದರ್ಶಿ ಪ್ರಕಾಶರಾವ್, ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ಸೇರಿದಂತೆ ಹುಲಿಗಿ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು, ಹುಲಿಗಿ ಸೇರಿದಂತೆ ಸುತ್ತಲಿನ ಅನೇಕ ಗ್ರಾಮಗಳ ಸದ್ಭಕ್ತರು ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!