Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಖಬರಸ್ತಾನ ಗೇಟ್ ಹಾಗೂ ನಾಮಫಲಕ ಉದ್ಘಾಟನೆ: ಸಸಿ ನೆಡುವ ಮೂಲಕ ಚಾಲನೆ ನೀಡಿದ ಕಾಡಾ ಅಧ್ಯಕ್ಷರು

ಡಿ.ಡಿ. ನ್ಯೂಸ್ : ಕುಷ್ಟಗಿ

Advertisement

ಕುಷ್ಟಗಿ ಗಾಳಿ ಮತ್ತು ನೀರು ಮಾನವನ ಜೀವನದ ಪ್ರಮುಖ ಆಧಾರಗಳಾಗಿದ್ದು, ಯುವಕರು ಪ್ರಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ತುಂಗಭದ್ರಾ ಯೋಜನೆ ಕಾಡಾ ನಿಗಮದ ಅಧ್ಯಕ್ಷರು ಹಾಗೂ ಕುಷ್ಟಗಿ ತಾಲೂಕು ಪಂಚ ಕಮಿಟಿ ಅಧ್ಯಕ್ಷರಾದ ಹಸನಸಾಬ ದೋಟಿಹಾಳ ಹೇಳಿದರು.

ಪಟ್ಟಣದ ಈದ್ಗಾ ಮೈದಾನದ ಸಮೀಪದ ಹಳೆ ನಿಡಶೇಸಿ ರಸ್ತೆಯಲ್ಲಿರುವ ಖಬರಸ್ತಾನದಲ್ಲಿ ನೂತನ ಗೇಟ್ ಹಾಗೂ ನಾಮಫಲಕ ಉದ್ಘಾಟನೆ ಮತ್ತು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕರು ಸಮಾಜದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡಬೇಕಿದ್ದು, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ, ಅದರ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಕಾರ್ಯನಿರ್ವಹಿಸಬೇಕು. ಸಮಾಜಮುಖಿ ಕೆಲಸಗಳಿಗೆ ಯುವಕರು ಹೆಚ್ಚಿನ ಆಸಕ್ತಿ ತೋರಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಖಬರಸ್ತಾನ ಕಮಿಟಿಯ ಯುವಕರ ತಂಡವನ್ನು ಅವರು ಶ್ಲಾಘಿಸಿದರು.news_1779893992_0_602.webpಈ ಸಂದರ್ಭದಲ್ಲಿ ಖಬರಸ್ತಾನಕ್ಕೆ ಉಚಿತವಾಗಿ ಗೇಟ್ ಮತ್ತು ನಾಮಫಲಕವನ್ನು ದೇಣಿಗೆಯಾಗಿ ನೀಡಿದ ಸಮಾಜದ ಮುಖಂಡರಾದ ಕರೀಂಸಾಬ ಚೌಧರಿ ಅವರನ್ನು ಕಮಿಟಿ ವತಿಯಿಂದ ಸನ್ಮಾನಿಸಲಾಯಿತು.

ಪರಿಸರ ಸಂರಕ್ಷಣೆಯ ಅಂಗವಾಗಿ ಖಬರಸ್ತಾನ ಆವರಣದಲ್ಲಿ ಸುಮಾರು 200 ರಿಂದ 300 ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು. ಕಾರ್ಯಕ್ರಮದಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ನಜೀರ್ ಸಾಬ ಮೂಲಿಮನಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಮೀರ್ ಟೆಕ್ಕಳಿಕಿ, ಸೈಯದ್ ಆಟೋ, ತಾಹೇರ್ ಕಪಾಲಿ, ಆಲಂ ಕಲ್ಬುರ್ಗಿ, ಆಸಿಫ್ ಗಂಧಣೆ, ಮೇಹಬೂಬ ವಾಲಿಕಾರ್, ರಹೀಮ್ ಚೌದರಿ, ನೂರಾ ಅಹ್ಮದ್, ಇಜಾಜ್ ಕಪಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!