ಮಕ್ಕಳ ಸಮಗ್ರ ಅಭಿವೃದ್ಧಿಯಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದು – ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದೇಶ ಮಾಳೇಕೊಪ್ಪ
ಯಲಬುರ್ಗಾ: ಮಕ್ಕಳ ಶಾರೀರಿಕ, ಮಾನಸಿಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದೇಶ ಮಾಳೇಕೊಪ್ಪ ಹೇಳಿದರು.
ತಾಲೂಕಿನ ಗಾಣಧಾಳ ಗ್ರಾಮದಲ್ಲಿ ನರೇಗಾ ಹಾಗೂ ಎಸ್.ಡಿ.ಪಿ ಒಗ್ಗೂಡಿಸುವಿಕೆ ಅನುದಾನದಡಿ ನಿರ್ಮಾಣಗೊಂಡ ನೂತನ ಐದನೇ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪ್ರಾರಂಭಿಕ ಶಿಕ್ಷಣದೊಂದಿಗೆ ಪೋಷಕಾಂಶಯುಕ್ತ ಆಹಾರ, ಆರೋಗ್ಯ ತಪಾಸಣೆ, ಲಸಿಕೆ ಜಾಗೃತಿ ಹಾಗೂ ಪೋಷಕರಿಗೆ ಪೌಷ್ಟಿಕತೆಯ ಕುರಿತು ಮಾರ್ಗದರ್ಶನ ನೀಡುವಲ್ಲಿ ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅವರು ವಿವರಿಸಿದರು.
ಅವರು ಮುಂದುವರಿದು ಮಾತನಾಡಿ, ಸರ್ಕಾರವು ಮಕ್ಕಳ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವನ್ನು ಪ್ರತಿಯೊಂದು ಕುಟುಂಬವೂ ಪಡೆಯಬೇಕು. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು ಮತ್ತು ಚಿಕ್ಕಮಕ್ಕಳ ಪೋಷಣೆಯಲ್ಲಿ ಅಂಗನವಾಡಿ ಕೇಂದ್ರಗಳ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಮಕ್ಕಳ ಉತ್ತಮ ಭವಿಷ್ಯವೇ ದೇಶದ ಅಭಿವೃದ್ಧಿಯ ಮೂಲಾಧಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಶಿಸ್ತು, ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಬೇಕು. ಅಂಗನವಾಡಿ ಕೇಂದ್ರಗಳು ಕೇವಲ ಕಲಿಕಾ ಕೇಂದ್ರಗಳಲ್ಲ, ಅವು ಮಕ್ಕಳ ಸಮಗ್ರ ಬೆಳವಣಿಗೆಯ ಆಧಾರಶಿಲೆಗಳಾಗಿವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ ಮಾತನಾಡಿ, ಗ್ರಾಮೀಣ ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಆ ಅನುದಾನವನ್ನು ಪಾರದರ್ಶಕವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಂಡು ಮಕ್ಕಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಪಿಡಿಒ ನೀಲಾ ಸೂರ್ಯಕುಮಾರಿ ಅವರು ಮಾತನಾಡಿ, ಗ್ರಾಮ ಅಭಿವೃದ್ಧಿಯಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ನಿರ್ಣಾಯಕವಾಗಿದೆ. ಮಕ್ಕಳ ಶಿಕ್ಷಣದ ಆರಂಭಿಕ ಹಂತವನ್ನು ಬಲಪಡಿಸುವುದರಿಂದ ಭವಿಷ್ಯದ ಪೀಳಿಗೆಗೆ ಉತ್ತಮ ನೆಲೆ ಸಿಗುತ್ತದೆ ಎಂದು ಅವರು ಹೇಳಿದರು.
ಗ್ರಾಮದ ಮುಖಂಡರಾದ ಸೋಮನಗೌಡ ಬೊದುರು, ಅಮರೇಶ ಕರಕಪ್ಪನವರ, ಹನುಮಂತಪ್ಪ, ಯಮನೂರಪ್ಪ ಗುಂಟಮಡು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು,
