Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಡಿ.ಡಿ. ನ್ಯೂಸ್ಯ. ಯಲಬುರ್ಗಾ: ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ತಾಲೂಕು ಘಟಕದ ಕಚೇರಿಯಲ್ಲಿ ಇದೇ ದಿ. 25ರಂದು ನಡೆಯಲಿರುವ ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪತ್ರಕರ್ತರ ಸಮಾವೇಶದ ಭಿತ್ತಿಪತ್ರವನ್ನು KUWJ ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ ಶುಕ್ರವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪತ್ರಕರ್ತರ ಸಮಾವೇಶವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಸಂಘದ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಪತ್ರಕರ್ತರ ವೃತ್ತಿಪರ ಕೌಶಲ್ಯ, ಸಮಸ್ಯೆಗಳು ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚಿಸಲು ಇಂತಹ ಸಮಾವೇಶಗಳು ಉತ್ತಮ ವೇದಿಕೆಯಾಗಲಿವೆ ಎಂದರು.news_1789121962_0_349.webpಯಲಬುರ್ಗಾ ತಾಲೂಕು ಘಟಕದ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ನಡೆಸಲು ತಾಲೂಕು ಘಟಕದ ಪದಾಧಿಕಾರಿಗಳು ಕೈಗೊಂಡಿರುವ ಸಿದ್ಧತಾ ಕಾರ್ಯಗಳು ಮೆಚ್ಚುವಂತಿವೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸುವ ಪತ್ರಕರ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ, ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.news_1789121932_0_288.webpKUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ. ನಾಗರಾಜ ಮಾತನಾಡಿ, ಪತ್ರಕರ್ತರ ಸಂಘವು ಪತ್ರಕರ್ತರ ಹಿತಾಸಕ್ತಿ ಕಾಪಾಡುವುದರ ಜೊತೆಗೆ ವೃತ್ತಿಪರ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ KUWJ ಗೌರವ ಅಧ್ಯಕ್ಷ ಇಮಾಮ ಸಂಕನೂರು, ತಾಲೂಕು ಅಧ್ಯಕ್ಷ ಮಲ್ಲು ಮಾಟರಂಗಿ, ಪ್ರಧಾನ ಕಾರ್ಯದರ್ಶಿ ಸಂತೋಷ ಬಂಡ್ರಿ, ರಾಜ್ಯ ಕಾರ್ಯಕಾರಣಿ ಸದಸ್ಯ ಸಿದ್ದು ಹಿರೇಮಠ, ಮಹಾಂತೇಶ ಛಲವಾದಿ, ಶರಣು ಗುಮಗೇರಿ, ಉಪಾಧ್ಯಕ್ಷ ಚಂದ್ರು ಮರದಡ್ಡಿ, ದೊಡ್ಡಬಸಪ್ಪ ಹಕಾರಿ, ಬಾಳನಗೌಡ ಚಂಪಗೌಡ್ರ, ಶ್ರೀಧರ ಪೂಜಾರ, ದೇವೇಂದ್ರ ಜಮಾದರ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!