Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಇಂದು ಬಲ್ಡೋಟ ವಿರೋಧಿ ಹೋರಾಟಕ್ಕೆ 200 ದಿನ; ವಿಶೇಷ ಸಮಾವೇಶ

ಡಿ.ಡಿ. ನ್ಯೂಸ್ : ಕೊಪ್ಪಳ

Advertisement

ಕೊಪ್ಪಳ ಬಲ್ಡೋಟ ವಿಸ್ತರಣೆ ಹಾಗೂ ಇತರೆ ಕಾರ್ಖಾನೆಗಳ ಮಾಲಿನ್ಯ ವಿರೋಧಿಸಿ ನಗರಸಭೆ ಮುಂದೆ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸೋಮವಾರ 200 ನೇ ದಿನಕ್ಕೆ ತಲುಪಿದ್ದು ಧರಣಿ ಸ್ಥಳದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೋರಾಟ ಬೆಂಬಲಿಸಲು ಅತಿಥಿಗಳಾಗಿ ಖ್ಯಾತ ಆರ್ಥ ಶಾಸ್ತ್ರಜ್ಞರು, ಹಂಪಿ ಕನ್ನಡ ವಿವಿ ನಿವೃತ್ತ ಪ್ರಾಧ್ಯಾಪಕರಾದ ಡಾ. ಟಿ.ಆರ್.ಚಂದ್ರಶೇಖರ ಮತ್ತು ನಿರ್ಮಲ ತುಂಗಭದ್ರ ಆಂದೋಲನದ ಸಂಚಾಲಕ, ಗಂಗಾವತಿ ದುರ್ಗಮ್ಮನ ಹಳ್ಳ ಸ್ವಚ್ಛಗೊಳಿಸಿದ ಡಾ. ಶಿವಕುಮಾರ ಮಾಲಿಪಾಟೀಲ್ ಆಗಮಿಸುತ್ತಿದ್ದು, ಸಮಾವೇಶದಲ್ಲಿ ಕೊಪ್ಪಳ, ಭಾಗ್ಯನಗರ ಹಾಗೂ 22 ಕಾರ್ಖಾನೆ ಬಾಧಿತ ಹಳ್ಳಿಯ ರೈತರು, ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಬೇಕೆಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ಮನವಿ ಮಾಡಿಕೊಳ್ಳಲಾಗಿದೆ. news_1779082149_0_634.webpಬೆಳಗ್ಗೆ 10 ಗಂಟೆಗೆ ಬಸವೇಶ್ವರ ವೃತ್ತದ ಹತ್ತಿರ, ಫೋಕಸ್ ಮಾರ್ಟ್ ಹಿಂದೆ ಇರುವ ಪರಿಸರ ಅಧಿಕಾರಿಗಳ ಕಾರ್ಯಾಲಯದ ಮುಂದೆ ಮಾಲಿನ್ಯಕಾರಿ ಕಾರ್ಖಾನೆಗಳನ್ನು ಶಾಶ್ವತವಾಗಿ ಮುಚ್ಚಲು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನೆ ಮಾಡಲಾಗುವುದು. 199ನೇ ದಿನದಲ್ಲಿ ನಡೆದ ಧರಣಿಯಲ್ಲಿ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ರವಿ ಕಾಂತನವರ, ನಿವೃತ್ತ ಪ್ರಾಚಾರ್ಯ ಬಿ.ಜಿ.ಕರಿಗಾರ, ಎಸ್.ಬಿ.ರಾಜೂರು, ರಾಜಶೇಖರ ಏಳುಬಾವಿ, ಶಿವಾನಂದಯ್ಯ ಬೀಳಗಿಮಠ, ಮಹಾದೇವಪ್ಪ ಮಾವಿನಮಡು, ವಿಜಯ ಮಹಾಂತೇಶ ಹಟ್ಟಿ, ನಟರಾಜ ಸವಡಿ, ವಿನಯ ಸಜ್ಜನ್, ಶಿವಪ್ಪ ಜಲ್ಲಿ, ವೆಂಕಟೇಶ, ನಾಗರಾಜ್ ಕುಷ್ಟಗಿ, ಅಬ್ದುಲ್ ರವೂಫ್, ರಸೀದ್ ಸಾಬ್, ಬಸರಾಜಪ್ಪ ಶೆಟ್ಟರ್, ಗಂಗಮ್ಮ ಕುರುಗೋಡು ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!