Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೇ 16 ಮತ್ತು ಮೇ 17ರಂದು ನಿಗದಿಯಾದ, ಕನಕಗಿರಿಯ ಗತವೈಭವದ ಬಿಂಬಿಸುವ ಕನಕಗಿರಿ ಉತ್ಸವ-2026ಕ್ಕೆ ಅಂತಿಮ ಹಂತದ ಸಿದ್ಧತೆಗಳು ಯುದ್ದೋಪಾದಿಯಲ್ಲಿ ಸಾಗಿದೆ ಎಂದು ಕನಕಗಿರಿ ಉತ್ಸವ 2026ರ ಆಚರಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮೇ 12ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ಸವದ ನಿಮಿತ್ತ ಮೇ 14 ಮತ್ತು ಮೇ 15ರಂದು ವಾಲಿಬಾಲ್, ಕಬಡ್ಡಿ ಮತ್ತು ಕುಸ್ತಿ ಪಂದ್ಯಗಳು ನಡೆಯಲಿವೆ. ಮೇ 16ರಂದು ಎದುರು ಹನುಮಪ್ಪ ದೇವಸ್ಥಾನದಿಂದ ಕನಕಾಚಲಪತಿ ದೇವಾಲಯದವರೆಗೆ ಸುಮಾರು 40 ಕಲಾ ತಂಡಗಳಿಂದ ಮೆರವಣಿಗೆ ನಡೆಯಲಿದೆ. ಅಂದು ಸಂಜೆ 6.30ಕ್ಕೆ ಮುಖ್ಯಮಂತ್ರಿಗಳು ಉತ್ಸವವನ್ನು ಉದ್ಘಾಟಿಸುವರು. ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲ ಗಣ್ಯ ಮಹನಿಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುತ್ತಿದೆ.

ಮೇ 16ರಂದು ಮೊದಲನೇ ದಿನ ಖ್ಯಾತ ಚಲನಚಿತ್ರ ನಟ ಶ್ರೀ ಮುರಳಿ, ಗಾಯಕರಾದ ಸಂಚಿತ್ ಹೆಗಡೆ, ಸವಾರಿ ಬ್ಯಾಂಡ್ ಮತ್ತು ಡಿಕೆಡಿ ಡ್ಯಾನ್ಸ್ ತಂಡದಿಂದ ವೈವಿದ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

ಮೇ 17ರಂದು ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಎರಡನೇ ದಿನ ಚಲನಚಿತ್ರ ನಟ ಡಾಲಿ ಧನಂಜಯ, ಚಲನಚಿತ್ರ ನಟಿ ಸಪ್ತಮಿ ಗೌಡ, ಗಾಯಕರಾದ ಅರ್ಜುನ ಜನ್ಯ, ಸಾದ್ವಿನಿ ಕೊಪ್ಪ, ಐಶ್ವರ್ಯ ರಂಗರಾಜನ್ಯ ಅವರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಕೂಹು ನಾಟಕ ಪ್ರದರ್ಶನ ಕೂಡ ಇರುತ್ತದೆ. ಮೇ 16 ಮತ್ತು ಮೇ 17ರಂದು ಎರಡೂ ದಿನವೂ ಕಾರ್ಯಕ್ರಮದ ಸ್ಥಳದಲ್ಲಿ ಮೈಸೂರ ದಸರಾ ಉತ್ಸವದ ಮಾದರಿಯಲ್ಲಿ ಆಕರ್ಷಕ ಡ್ರೋನ್ ಶೋ ನಡೆಯಲಿದೆ ಇರುತ್ತದೆ.

ಮುಖ್ಯ ವೇದಿಕೆ ರಾಜ ಉಡಚಪ್ಪ ನಾಯಕ ಮತ್ತು ಉಪ ವೇದಿಕೆ ಜಯತೀರ್ಥ ರಾಜಪುರೋಹಿತ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಮೇ 16ರಂದು ಕನಕಗಿರಿ ಪರಂಪರೆ ಮತ್ತು ಪ್ರಗತಿ ಮೇಲೆ ವಿಚಾರಗೋಷ್ಠಿ ನಡೆಯಲಿದೆ. ಮೇ 17ರಂದು ಮಹಿಳೆ ವರ್ತಮಾನದ ತಲ್ಲಣಗಳು ವಿಷಯದ ಮೇಲೆ ಮಹಿಳಾಗೋಷ್ಠಿ ನಡೆಯಲಿದೆ. ಕವಿಗಳಿಂದ ಕವಿತಾ ವಾಚನ ಇರುತ್ತದೆ. ಡ್ರೋನ್ ಶೋ, ಕನಕಗಿರಿ ಪಟ್ಟಣಕ್ಕೆ ದೀಪಾಲಂಕಾರ ಮತ್ತು ಹೆಲಿಕ್ಯಾಪ್ಟರ್ ರೈಡ್ ಉತ್ಸವದ ವಿಶೇಷತೆಗಳಾಗಿವೆ ಎಂದು ಅವರು ತಿಳಿಸಿದರು.

*ಸಾರ್ವಜನಿಕರಲ್ಲಿ ಮನವಿ:*

ಕನಕಗಿರಿ ಉತ್ಸವವು ಈ ಬಾರಿ ಬೇರೆ ಬೇರೆ ವಿಶೇಷತೆಗಳನ್ನು ಹೊಂದಿದೆ. ಉತ್ಸವಕ್ಕೆ ಆಗಮಿಸಲಿರುವ ಜನತೆಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ಸಿನ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಮಳಿಗೆ, ವಿವಿಧ ಇಲಾಖೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯ ಮಳಿಗೆಗಳು, ಸ್ವಸಹಾಯ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ತೋಟಗಾರಿಕಾ ಇಲಾಖೆಯಿಂದ

ಫಲಪುಷ್ಪ ಪದರ್ಶನ ಸೇರಿದಂತೆ ನಾನಾ ವಿಶೇಷತೆಯ ಉತ್ಸವಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಉಪಸ್ಥಿತರಿದ್ದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!